ಚಿತ್ರಗಳು: ಗವಿಮಠ ರವಿ
ಮೈಸೂರು: ಕಡೇ ಕಾರ್ತಿಕ ಸೋಮವಾರದ ಪ್ರಯುಕ್ತ ನಗರದ ವಿವಿಧ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಭಿಷೇಕ, ಅಲಂಕಾರ ದಿನವಿಡೀ ನಡೆಯಿತು.
ಕೊರೊನಾ ಸಮಸ್ಯೆಯಿಂದಾಗಿ ಕಳೆದ ಎರಡು ವರ್ಷಗಳಿಂದ ಕಾರ್ತಿಕ ಮಾಸದ ಧಾರ್ಮಿಕ ಆಚರಣೆ ಕಳೆಗುಂದಿತ್ತು. ಆದರೆ, ಈ ಬಾರಿ ನಗರದ ಹಲವಾರು ದೇವಾಲಯಗಳಲ್ಲಿ ಸೋಮವಾರ ಬೆಳಿಗ್ಗೆಯಿಂದಲೇ ಪೂಜೆ-ಪುನಸ್ಕಾರಗಳು ನಡೆದವು.
ಅಗ್ರಹಾರ ಸೇರಿದಂತೆ ವಿವಿಧ ಗಣೇಶ ದೇವಸ್ಥಾನಗಳಲ್ಲಿ ಗಣೇಶ ವಿಗ್ರಹಕ್ಕೆ ವಿಶೇಷ ಬೆಣ್ಣೆ ಅಲಂಕಾರ ಮಾಡಲಾಗಿತ್ತು.
ಸಂಜೆ ವೇಳೆಗೆ ವಿವಿಧ ಬಡಾವಣೆಗಳ ಶಿವ ದೇವಾಲಯಗಳಲ್ಲಿ ದೀಪೋತ್ಸವ ಆರಂಭವಾಯಿತು.
ನಗರದ ಹಿನಕಲ್‌ನ ನನ್ನೇಶ್ವರ ದೇಗುಲದಲ್ಲಿ ದೀಪೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ನೂರಾರು ಮಂದಿ ದೇವಾಲಯಕ್ಕೆ ಆಗಮಿಸಿ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದರು.
ರಾವಾನುಜ ರಸ್ತೆಯಲ್ಲಿರುವ ಕಾಮ ಕಾಮೇಶ್ವರಿ ದೇವಾಲಯ ಹಾಗೂ ಅಗ್ರಹಾರದಲ್ಲಿರುವ ಮಹಾ ಗಣಪತಿ ದೇವಾಲಯದಲ್ಲಿ ಸಂಜೆ ೭ ಗಂಟೆ ನಂತರ ದೀಪೋತ್ಸವ ಕಾರ್ಯಕ್ರಮ ನಡೆಯಿತು. ನೂರಾರು ಮಹಿಳೆಯರು ದೀಪಗಳೊಂದಿಗೆ ದೇವಾಲಯಕ್ಕೆ ಆಗಮಿಸಿ ದೀಪ ಬೆಳಗಿದರು.
ನಗರದ ಶ್ರೀ ರಾಂಪುರದಲ್ಲಿರುವ ಶಿವ ದೇವಾಲಯ, ವಿಶ್ವ ಮಾನವ ಜೋಡಿ ರಸ್ತೆಯಲ್ಲಿರುವ ಶಿವಲಿಂಗೇಶ್ವರ ದೇವಾಲಯ, ಅದಿಚುಂಚನಗಿರಿ ರಸ್ತೆಯ ಮರುಳೇಶ್ವರ ದೇವಾಲಯ. ಕೆ.ಜಿ.ಕೊಪ್ಪಲಿನ ಚಂದ್ರಮೌಳೇಶ್ವರ, ಅರಮನೆ ಆವರಣದಲ್ಲಿರುವ ತ್ರಿನಯನೇಶ್ವರ, ಮಂಡಿ ಮೊಹಲ್ಲಾದ ಶಿವ ದೇವಾಲಯ ಮುಂತಾದ ದೇವಾಲಯಗಳಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು.
ಕೊಂಡೋತ್ಸವ: ನಗರದ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಮಹದೇಶ್ವರ ದೇವಾಲಯದಲ್ಲಿ ಕೊಂಡೋತ್ಸವ ಸೇರ್ಪಡಿಸಲಾಗಿತ್ತು.
ರಾತ್ರಿ ಪೂರಾ ಸುಣ್ಣದಕೇರಿಯ ರಸ್ತೆಗಳಲ್ಲಿ ಮಹದೇಶ್ವರ ಸ್ವಾಮಿ ಮೂರ್ತಿ ಮೆರವಣಿಗೆ ನಡೆಯಿತು. ಮುಂಜಾನೆ ಕೊಂಡೋತ್ಸವ ಜರುಗಿತು.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…