ಜಿಲ್ಲೆಗಳು

ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ದಿನಗಣನೆ

ಅಕ್ಷಯ ಪಾತ್ರೆ, ಕಾಣಿಕೆ ಡಬ್ಬಿ ಇಡುವ ಕಾರ್ಯಕ್ರಮ ಇಂದು : ಭಾಗಮಂಡಲದಲ್ಲಿ ಅಗತ್ಯ ಸಿದ್ಧತೆ

ನವೀನ್ ಡಿಸೋಜ
ಮಡಿಕೇರಿ: ಕೊಡಗಿನ ಜನತೆಯ ಆರಾಧ್ಯ ದೇವತೆ, ವಾತೆ ಕಾವೇರಿ ತೀರ್ಥ ರೂಪಿಣಿಯಾಗಿ ಆವಿರ್ಭವಿಸುವ ತುಲಾಸಂಕ್ರಮಣ ಜಾತ್ರೆ ಅ.೧೭ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಬಿರುಸಿನ ಸಿದ್ಧತಾ ಕಾರ್ಯಗಳು ನಡೆಯುತ್ತಿವೆ.
ಪ್ರಸಕ್ತ ಸಾಲಿನಲ್ಲಿ ಕಾವೇರಿುಯ ತೀರ್ಥೋದ್ಭವ ಅ.೧೭ ರಂದು ರಾತ್ರಿ ೭.೨೧ ಗಂಟೆಗೆ ಮೇಷ ಲಗ್ನದಲ್ಲಿ ಘಟಿಸಲಿದೆ. ತುಲಾ ಸಂಕ್ರಮಣ ಜಾತ್ರೆಗೂ ಮುಂಚಿತವಾಗಿ ಕಳೆದ ಸೆ.೨೭ ರಂದು ಭಾಗಮಂಡಲದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವುದು ಕಾರ್ಯಕ್ರಮ, ಅ.೫ರಂದು ಆಜ್ಞಾ ಮುಹೂರ್ತ ಕಾರ್ಯಕ್ರಮಗಳು ನಡೆದಿವೆ. ಅ.೧೫ರಂದು ಬೆಳಿಗ್ಗೆ ೧೧.೪೫ ನಿಮಿಷಕ್ಕೆ ಸಲ್ಲುವ ಧನುರ್ ಲಗ್ನದಲ್ಲಿ ಅಕ್ಷಯ ಪಾತ್ರೆ ಇರಿಸುವುದು ಮತ್ತು ಸಂಜೆ ೦೪.೧೫ ನಿಮಿಷಕ್ಕೆ ಸಲ್ಲುವ ಕುಂಭ ಲಗ್ನದಲ್ಲಿ ಕಾಣಿಕೆ ಡಬ್ಬಿಗಳನ್ನು ಇಡುವುದು ಕಾರ್ಯಕ್ರಮಗಳು ನಡೆಯಲಿವೆ.
ತೀರ್ಥೋದ್ಭವದ ಕ್ಷಣವನ್ನು ಮನದುಂಬಿಕೊಂಡು ಕಾವೇರಿ ತೀರ್ಥವನ್ನು ಕೊಂಡೊಯ್ಯಲು ಜಿಲ್ಲೆಯಾದ್ಯಂತ ಹಾಗೂ ರಾಜ್ಯ ಮತ್ತು ಹೊರ ರಾಜ್ಯಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಜನರು ಕ್ಷೇತ್ರಕ್ಕೆ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಭಾಗಮಂಡಲ ಮತ್ತು ತಲಕಾವೇರಿುಂಲ್ಲಿ ಸಂಪ್ರದಾಯದಂತೆ ನಡೆಸುವ ಪೂಜೆ ಮತ್ತು ಧಾರ್ಮಿಕ ಆಚರಣೆಗಳಿಗೆ ಪೂರಕವಾದ ಸಿದ್ಧತೆಗಳಿಗೆ ಜಿಲ್ಲಾಡಳಿತ ಒತ್ತು ನೀಡಿದೆ.
ಸಂಪ್ರದಾಯದಂತೆ ಕಾವೇರಿಯ ಕ್ಷೇತ್ರಕ್ಕೆ ಆಗಮಿಸುವವರು ಮೊದಲು ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ವಾಡಿ, ತ್ರಿವೇಣಿ ಸಂಗಮದಲ್ಲಿ ಪಿತೃಗಳಿಗೆ ಪಿಂಡ ಪ್ರಧಾನ ವಾಡುವುದು, ಶ್ರೀ ಭಗಂಡೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವುದು ವಾಡಿಕೆ. ಇದಕ್ಕೆ ಅನುಗುಣವಾದ ಕೆಲಸ ಕಾರ್ಯಗಳು ನಡೆಯುತ್ತಿವೆ.
ಪ್ರಸ್ತುತ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಕ್ಷೀಣಿಸಿದ್ದು, ಕೇವಲ ಒಂದೆರಡು ಅಡಿಗಳಷ್ಟೆ ನೀರು ಹರಿದು ಹೋಗುತ್ತಿದೆ. ಈ ಹಿನ್ನೆಲೆಯಲ್ಲಿ ತ್ರಿವೇಣಿ ಸಂಗಮದಲ್ಲಿ ಸಂಗ್ರಹವಾಗಿರುವ ಹೂಳು ಮಿಶ್ರಿತ ಭಾರೀ ಪ್ರವಾಣದ ಮರಳನ್ನು ತೆಗೆಯುವ ಕೆಲಸ ವಾಡಲಾಗಿದೆ. ಹೂಳು ಮಿಶ್ರಿತ ಮರಳನ್ನು ತೆಗೆದು, ಸಂಗಮದಲ್ಲಿ ಪುಣ್ಯಸ್ನಾನಕ್ಕೆ ಅನುಕೂಲವಾಗುವಂತೆ ಅಲ್ಲೇ ಸಮೀಪದ ಸೇತುವೆಯ ಬಳಿ ನೀರನ್ನು ತಡೆಹಿಡಿಯುವ ಕೆಲಸ ಮಾಡಲಾಗಿದೆ.
ಸಾವಾನ್ಯವಾಗಿ ಕ್ಷೇತ್ರಕ್ಕೆ ಭೇಟಿ ನೀಡುವವರು ತಮ್ಮ ಪಿತೃಗಳಿಗೆ ಪಿಂಡ ಪ್ರದಾನ ವಾಡುವ ಕಾರ್ಯ ತ್ರಿವೇಣಿ ಸಂಗಮದ ಬಳಿಯ ದಡದಲ್ಲಿ ನಡೆಸುತ್ತಾರೆ. ನದಿ ದಂಡೆಯಲ್ಲಿನ ಹೆಚ್ಚುವರಿ ಮಣ್ಣನ್ನು ತೆಗೆದು ಪಿತೃ ಕಾರ್ಯಗಳಿಗೆ ಅನುಕೂಲ ಕಲ್ಪಿಸುವ ಮುಖ್ಯ ಕಾರ್ಯವನ್ನು ಇದೀಗ ನಡೆಸಲಾಗುತ್ತಿದೆ.
ಜೀವನದಿ ಕಾವೇರಿಯ ತೀರ್ಥೋದ್ಭವದ ತುಲಾ ಸಂಕ್ರಮಣ ಜಾತ್ರೆಯ ಹಿನ್ನೆಲೆ ದೇಗುಲವನ್ನು ಒಳಗೊಂಡಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ, ಸುಣ್ಣ ಬಣ್ಣ ಬಳಿಯುವ ಕಾರ್ಯಗಳು ಚುರುಕಿನಿಂದ ನಡೆಯುತ್ತಿದೆ. ರಸ್ತೆಗಳ ಗುಂಡಿ ಮುಚ್ಚುವ ಕಾರ್ಯ ನಡೆದಿದೆ. ಬೆಳಕಿನ ವ್ಯವಸ್ಥೆ ಹಾಗೂ ಸುಗಮ ಸಂಚಾರ ವ್ಯವಸ್ಥೆಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.


ಗುಂಡಿ ಬಿದ್ದಿರುವ ರಸ್ತೆಗಳನ್ನು ಸರಿಪಡಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು. ಪೂಜಾ ಪದ್ಧತಿಯಲ್ಲಿ ಯಾವ ಗೊಂದಲವಿಲ್ಲದೆ ಈ ಹಿಂದೆ ಆಚರಿಸಿಕೊಂಡು ಬಂದ ರೀತಿಯಲ್ಲಿ ಈ ಬಾರಿಯೂ ನಡೆಸಿಕೊಂಡು ಹೋಗಲಾಗುತ್ತದೆ. ಜಿಲ್ಲೆ ಹಾಗೂ ಹೊರ ರಾಜ್ಯದಿಂದ ಆಗಮಿಸುವ ಜನರಿಗೆ ಅಗತ್ಯ ಭದ್ರತೆ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಲಾಗುವುದು.
-ಡಾ.ನಂಜುಂಡೇಗೌಡ, ಹೆಚ್ಚುವರಿ ಜಿಲ್ಲಾಧಿಕಾರಿ


ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುವ ನಿರೀಕ್ಷೆ ಇರುವುದರಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಂಚಾರ ವ್ಯವಸ್ಥೆಗೆ ಯಾವ ರೀತಿ ಅಡಚಣೆಯಾಗದ ರೀತಿಯಲ್ಲಿ ಸೂಕ್ತ ಕ್ರಮ ವಹಿಸಲಾಗುವುದು. ವಾಹನ ನಿಲುಗಡೆ ಹಾಗೂ ಕುಂಡಿಕೆಯು ಸುತ್ತಮುತ್ತಲು ಮುಂಜಾಗ್ರತೆ ಕ್ರಮ ವಹಿಸಲಾಗುವುದು.
-ಗಜೇಂದ್ರ ಪ್ರಸಾದ್, ಉಪ ಪೊಲೀಸ್ ವರಿಷ್ಠಾಧಿಕಾರಿ

 

andolanait

Recent Posts

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

17 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

1 hour ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

2 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

2 hours ago

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…

2 hours ago