ಮೈಸೂರು: ಕಬಾಬ್ ಮಾರಾಟ ಮಾಡುವವನ ಹತ್ಯೆ ಸಂಬಂಧ ಎನ್.ಆರ್ ಠಾಣೆ ಪೊಲೀಸರು ತಲೆ ಮರೆಸಿಕೊಂಡಿದ್ದ ಇನ್ನಿಬ್ಬರು ಆರೋಪಿಗಳನ್ನು ಬುಧವಾರ ಬಂಧಿಸಿದ್ದಾರೆ.
ಜಭಿ ಅಲಿಯಾಸ್ ಬ್ರೂಸ್ಲಿ ಮತ್ತು ಇಕ್ಬಾಲ್ ಬಂಧಿಸಿರುವುದು. ಮಂಗಳವಾರ ಸೈಯದ್ ಝೈನುಲ್ಲಾ ಬಿನ್ ಮತ್ತು ಬಬನ್ ಎಂಬವರನ್ನು ಬಂಧಿಸಲಾಗಿತ್ತು.
‘ಹುಡುಗಿಯರನ್ನು ಚುಡಾಯಿಸಬೇಡಿ’ ಎಂದು ಬುದ್ಧಿವಾದ ಹೇಳಿದ ಕಬಾಬ್ ಮಾರಿ ಜೀವನ ನಡೆಸುತ್ತಿದ್ದ ಕಲ್ಯಾಣಗಿರಿ ನಿವಾಸಿ ಸಯ್ಯದ್ ಮನ್ಸೂರ್(32) ಎಂಬವನ ಅಪಹರಣಕ್ಕೆ ಸಂಬಂಧಪಟ್ಟಂತೆ ಭಾನುವಾರ ರಾತ್ರಿ ಎನ್.ಆರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಪಹರಣಗೊಂಡ ಸ್ಥಳವನ್ನು ಮತ್ತು ಸುತ್ತಲು ಇರುವ ಸಿಸಿ ಕ್ಯಾಮೆರಾವನ್ನು ಪರಿಶೀಲನೆ ನಡೆಸಿದ ಪೊಲೀಸರಿಗೆ ಮನ್ಸೂರ್‌ನನ್ನು ಕೊಲೆ ಮಾಡಿರಬಹುದು ಎಂಬ ಸಂಶಯ ಮೂಡಿತ್ತು. ಕಾರ್ಯಾಚರಣೆ ಕೈಗೊಂಡ ಪೊಲೀಸರು ಮಂಗಳವಾರ ಬೆಳಿಗ್ಗೆ ಸೈಯದ್ ಝೈನುಲ್ಲಾ ಬಿನ್ ಮತ್ತು ಬಬನ್ ಎಂಬಾತನನ್ನು ಬಂಧಿಸಿದ್ದರು. ಆ ನಂತರ ಸಂಜೆ ಪಾಂಡವಪುರದ ದರಸನಕುಪ್ಪೆ ಬಳಿಯ ನಾಲೆಯಲ್ಲಿ ಸಯ್ಯದ್ ಮನ್ಸೂರ್ ದೇಹ ಪತ್ತೆಯಾಗಿತ್ತು. ತಲೆಮರೆಸಿಕೊಂಡಿದ್ದ ಇನ್ನಿಬ್ಬರು ಆರೋಪಿಗಳಾದ ಜಭಿ ಅಲಿಯಾಸ್ ಬ್ರೂಸ್ಲಿ ಮತ್ತು ಇಕ್ಬಾಲ್ ಎಂಬವರನ್ನು ಬುಧವಾರ ಬಂಧಿಸಿದ್ದಾರೆ.
ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…
ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…
ಬೆಂಗಳೂರು : ಬಾಲಗಂಗಾಧರನಾಥ ಶ್ರೀಗಳ ಧಾರ್ಮಿಕ ಗದ್ದುಗೆ ಲೋಕಾರ್ಪಣೆ ಹಾಗೂ ಡಾ.ನಿರ್ಮಲಾನಂದನಾಥ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ…
ಬೆಂಗಳೂರು : ಎಲ್ಲಾ ಅಧಿಕಾರಿಗಳು ಜಾತ್ಯಾತೀತ ದೃಷ್ಠಿಕೋನದಿಂದ ಕಾರ್ಯ ನಿರ್ವಹಿಸಬೇಕು. ಆಗಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…