ಮೈಸೂರು : ವಿಜಯನಗರ ೩ನೇ ಹಂತದ ‘ಸಿ’ ಬ್ಲಾಕ್ ನಲ್ಲಿರುವ ಯುರೋ ಶಾಲೆ ಎದುರು ರಸ್ತೆ ಕೆಸರುಗದ್ದೆಯಂತಾಗಿದ್ದು ಶಾಲೆಯ ಮಕ್ಕಳು ಓಡಾಡಲು ತುಂಬಾ ಕಷ್ಟಪಡುತ್ತಿದ್ದಾರೆ.
ಭಾನುವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ರಸ್ತೆ ಕೆಸರು ಗದ್ದೆಯಂತಾಗಿದ್ದು, ಪುಟಾಣಿ ಮಕ್ಕಳು ಕೆಸರಿನಲ್ಲಿಯೇ ಶಾಲೆ ಸೇರಬೇಕಾದ ದುಸ್ಥಿತಿ ಬಂದಿದೆ.
ಸೊಳ್ಳೆಗಳ ಕಾಟ: ಶಾಲೆಯ ಪಕ್ಕದಲ್ಲೇ ಚರಂಡಿ ಹಾದುಹೋಗಿದ್ದು, ಮಣ್ಣು, ತ್ಯಾಜ್ಯ ಚರಂಡಿಯಲ್ಲಿ ಶೇಖರಣೆಯಾಗಿ ನೀರು ಸರಾಗವಾಗಿ ಹರಿಯದೆ ಸೊಳ್ಳೆಗಳ ತಾಣವಾಗಿ ಮಾರ್ಪಟ್ಟಿದ್ದು, ಇದರಿಂದ ಸಾಂಕ್ರಮಿಕ ಕಾಯಿಲೆ ಹರಡುವ ಭೀತಿ ಎದುರಾಗಿದೆ. ಸೊಳ್ಳೆಗಳ ಕಾಟದಿಂದ ಸಣ್ಣ ಮಕ್ಕಳು ಶಾಲೆಯಲ್ಲಿ ಕುಳಿತು ಪಾಠ ಕೇಳಲು ಕಿರಿಕಿರಿ ಅನುಭವಿಸುವಂತಾಗಿದೆ.
ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ರಸ್ತೆ ಸರಿಪಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ನವದೆಹಲಿ: ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸರ್ವೇ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ,…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಗುತ್ತಿಗೆದಾರರಿಂದ 60% ಕಮಿಷನ್ ಸುಲಿಗೆ ಮಾಡುತ್ತಿದೆ ಎಂದು ಮತ್ತೆ ಆರೋಪ ಮಾಡಿರುವ ಕೇಂದ್ರ ಸಚಿವ…
ರಾಯ್‌ಪುರ: ಭದ್ರತಾ ಸಿಬ್ಬಂದಿಯಿದ್ದ ವಾಹನವನ್ನು ನಕ್ಸಲರು ಸುಧಾರಿತ ಸ್ಫೋಟಕ ಸಾಧನ ಬಳಸಿ ಸ್ಫೋಟಿಸಿದ ಪರಿಣಾಮ ಓರ್ವ ಚಾಲಕ ಸೇರಿದಂತೆ 8…
ಬೆಂಗಳೂರು: ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ಉದ್ದೇಶದಿಂದ ಆನ್‌ಲೈನ್ ಮೂಲಕವೇ ಎಫ್‌ಐಆರ್ ದಾಖಲಿಸಿ ಮೇಲ್ವಿಚಾರಣೆ ನಡೆಸಲು ʼಗರುಡಾಕ್ಷಿʼ ಎಂಬ…
ಬೆಂಗಳೂರು: ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಗೆ ಸಂಬಂಧಿಸಿದಂತೆ ತ್ವರಿತ ಗತಿಯಲ್ಲಿ ಭೂಮಿ ಹಸ್ತಾಂತರ ಮಾಡಿ ಎಂದು ಸಂಸದ ಯದುವೀರ್ ಕೃಷ್ಣದತ್ತ…
ಎಚ್.ಡಿ.ಕೋಟೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕುಮಾರಸ್ವಾಮಿ ಅವರಿಂದು ಎಚ್.ಡಿ.ಕೋಟೆ ತಾಲ್ಲೂಕಿನ ಅಣ್ಣೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಿಢೀರ್…