Mysore
17
overcast clouds

Social Media

ಗುರುವಾರ, 08 ಜನವರಿ 2026
Light
Dark

ಮಹದೇಶ್ವರ ಬೆಟ್ಟದಲ್ಲಿ ಕೆಸ್ಸಾರ್ಟಿಸಿ ಬಸ್ ಪಲ್ಟಿ, ಚಾಲಕನಿಗೆ ಗಾಯ

ಹನೂರು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ಸೊಂದು ಪಲ್ಟಿಯಾಗಿರುವ ಘಟನೆ ಮ. ಬೆಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ತಾಳು ಬೆಟ್ಟದ ಸಮೀಪ ಜರುಗಿದೆ.

ಮಲೆ ಮಹದೇಶ್ವರ ಬೆಟ್ಟದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ತಾಳುಬೆಟ್ಟದ 6 ನೇ ತಿರುವಿನಲ್ಲಿ ಪಲ್ಟಿಯಾಗಿದೆ.ಅದೃಷ್ಟವಶಾತ್ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಾಲಕನಿಗೆ ತೀವ್ರ ಗಾಯವಾಗಿದೆ.ಗಾಯಗೊಂಡಿರುವ ಚಾಲಕನನ್ನು ಆಂಬ್ಯುಲೆನ್ಸ್ ಮೂಲಕ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಸಂಬಂಧ ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ,ಚಾಲಕನ ಕಾಲಿಗೆ ಗೆ.ಪ್ರಯಾಣಿಕರಿಗೆ ಯಾವುದೇ ಗಾಯವಾಗಿಲ್ಲ, ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ –ಬಸವರಾಜು ವೃತ್ತ ನಿರೀಕ್ಷಕರು ಮದೇಶ್ವರ ಬೆಟ್ಟ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!