ಜಿಲ್ಲೆಗಳು

ಮಹದೇಶ್ವರ ಬೆಟ್ಟದಲ್ಲಿ ಕೆಸ್ಸಾರ್ಟಿಸಿ ಬಸ್ ಪಲ್ಟಿ, ಚಾಲಕನಿಗೆ ಗಾಯ

ಹನೂರು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ಸೊಂದು ಪಲ್ಟಿಯಾಗಿರುವ ಘಟನೆ ಮ. ಬೆಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ತಾಳು ಬೆಟ್ಟದ ಸಮೀಪ ಜರುಗಿದೆ.

ಮಲೆ ಮಹದೇಶ್ವರ ಬೆಟ್ಟದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ತಾಳುಬೆಟ್ಟದ 6 ನೇ ತಿರುವಿನಲ್ಲಿ ಪಲ್ಟಿಯಾಗಿದೆ.ಅದೃಷ್ಟವಶಾತ್ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಾಲಕನಿಗೆ ತೀವ್ರ ಗಾಯವಾಗಿದೆ.ಗಾಯಗೊಂಡಿರುವ ಚಾಲಕನನ್ನು ಆಂಬ್ಯುಲೆನ್ಸ್ ಮೂಲಕ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಸಂಬಂಧ ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ,ಚಾಲಕನ ಕಾಲಿಗೆ ಗೆ.ಪ್ರಯಾಣಿಕರಿಗೆ ಯಾವುದೇ ಗಾಯವಾಗಿಲ್ಲ, ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ –ಬಸವರಾಜು ವೃತ್ತ ನಿರೀಕ್ಷಕರು ಮದೇಶ್ವರ ಬೆಟ್ಟ.

andolana

Recent Posts

ಸಿದ್ದಾಪುರ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣ

ಕೃಷ್ಣ ಸಿದ್ದಾಪುರ ಸಿಬ್ಬಂದಿ ಕೊರತೆ, ಜನಸಂಖ್ಯೆ ಆಧಾರದಲ್ಲಿ ಹೊಸ ಠಾಣೆ ಸ್ಥಾಪನೆ, ಹೆಚ್ಚಿನ ಸಿಬ್ಬಂದಿ ನಿಯೋಜನೆಗೆ ಆಗ್ರಹ  ಸಿದ್ದಾಪುರ:ಸಿದ್ದಾಪುರ ಪೊಲೀಸ್…

3 mins ago

ಮೈಮುಲ್ ಆಡಳಿತ ಮಂಡಳಿ ಚುನಾವಣೆಯತ್ತ ಎಲ್ಲರ ಚಿತ್ತ

ಕೆ.ಬಿ.ರಮೇಶನಾಯಕ ಮೈಸೂರು: ಮೈಸೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(ಮೈಮುಲ್) ಆಡಳಿತ ಮಂಡಳಿಯ ಐದು ವರ್ಷಗಳ ಆಡಳಿತ ಮುಂದಿನ…

9 mins ago

ನಾಳೆಯಿಂದ ಪ್ರಸಿದ್ಧ ಚಿಕ್ಕಲ್ಲೂರು ಜಾತ್ರೆ

ಚಾಮರಾಜನಗರ: ಕೊಳ್ಳೇಗಾಲ ತಾಲ್ಲೂಕಿನ ಶ್ರೀ ಕ್ಷೇತ್ರ ಚಿಕ್ಕಲ್ಲೂರು ಸಿದ್ದಪ್ಪಾಜಿ ಜಾತ್ರಾ ಮಹೋತ್ಸವ ಜ.೩ರಿಂದ ೫ ದಿನಗಳ ಕಾಲ ನಡೆಯಲಿದೆ. ಉಚ್ಚ…

14 mins ago

ಹೊಸ ವರ್ಷಾಚರಣೆಗೆ ದಾಖಲೆಯ ಮದ್ಯ ಮಾರಾಟ

ಗಿರೀಶ್‌ ಹುಣಸೂರು  ಮೈಸೂರು: ಜೀವನದಲ್ಲಿ ಹಲವು ಏಳು-ಬೀಳುಗಳನ್ನು ನೀಡಿದ ೨೦೨೫ನೇ ವರ್ಷವನ್ನು ಬೀಳ್ಕೊಟ್ಟು, ಹಲವು ನಿರೀಕ್ಷೆಗಳೊಂದಿಗೆ ೨೦೨೬ನೇ ಹೊಸ ವರ್ಷವನ್ನು…

19 mins ago

ಬಳ್ಳಾರಿ ಬ್ಯಾನರ್‌ ಗಲಾಟೆ | ಕೈ ಕಾರ್ಯಕರ್ತನಿಗೆ ಗುಂಡೇಟು ; ಸಾವು, ಉದ್ವಿಗ್ನ ವಾತಾವರಣ

ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ…

9 hours ago