ಮೈಸೂರು: ನವರಾತ್ರಿಯ ಪ್ರಮುಖ ಆಕರ್ಷಣೆಯಾದ ರತ್ನಖಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, ಯದುವಂಶದ ಉತ್ತರಾಧಿಕಾರಿ ಹಾಗೂ ಪ್ರಮೋದಾದೇವಿ ಅವರ ದತ್ತು ಪುತ್ರ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸಿದರು.
ಅರಮನೆಯ ರಾಜ ವಂಶಸ್ಥರು, ಯದು ವಂಶದ ಸಾಂಪ್ರದಾಯದಂತೆ ನವರಾತ್ರಿಯ ಮೊದಲ ದಿನ ಇಂದು ಅಂಬಾವಿಲಾಸ ಅರಮನೆಯ ದರ್ಬಾರ್ ಹಾಲ್ನಲ್ಲಿ ಇರುವ ರತ್ನಖಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, ಸಿಂಹಾಸನಕ್ಕೆ ಸಿಂಹ ಜೋಡಣೆ ಮಾಡಿ ಖಾಸಗಿ ದರ್ಬಾರ್ ನಡೆಸಿದರು.
ಬೆಳಗ್ಗೆ ಶುಭ ಮುಹೂರ್ತದಲ್ಲಿ ಅರಮನೆಯಲ್ಲಿ ಹೋಮ ಹವನಗಳನ್ನು ನಡೆಸಿದ ಯದುವೀರ್ ನವರರಾತ್ರಿಯ ಕಂಕಣ ಧಾರಣೆ ಮಾಡಿ ನಂತರ ಅರಮನೆಯಲ್ಲಿ ಖಾಸಗಿ ದರ್ಬಾರ್ನ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಿರು. ಬಳಿಕ 12.15 ರಿಂದ 12.25 ವರೆಗಿನ ಶುಭ ಗಳಿಗೆಯಲ್ಲಿ ರತ್ನಖಚಿತ ಸಿಂಹಾಸನಾರೋಹಣ ಮಾಡಿ ಖಾಸಗಿ ದರ್ಬಾರ್ ನಡೆಸಿದರು. ನಂತರ 33 ದೇವಾಲಯಗಳಿಂದ ಬಂದ ಪ್ರಸಾದ ಹಾಗೂ ತೀರ್ಥ ಸೇವನೆ ಮಾಡಿದರು. ಬಳಿಕ ಅರಮನೆ ಆನೆಗಳು, ಕುದುರೆ, ಹಸು, ಒಂಟೆಗಳೊಂದಿಗೆ ಆಗಮಿಸಿ ಪೂಜೆ ಸಲ್ಲಿಸಿದರು.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…