ಜಿಲ್ಲೆಗಳು

ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, ಖಾಸಗಿ ದರ್ಬಾರ್ ನಡೆಸಿದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

ಮೈಸೂರು: ನವರಾತ್ರಿಯ ಪ್ರಮುಖ ಆಕರ್ಷಣೆಯಾದ ರತ್ನಖಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, ಯದುವಂಶದ ಉತ್ತರಾಧಿಕಾರಿ ಹಾಗೂ ಪ್ರಮೋದಾದೇವಿ ಅವರ ದತ್ತು ಪುತ್ರ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸಿದರು.
ಅರಮನೆಯ ರಾಜ ವಂಶಸ್ಥರು, ಯದು ವಂಶದ ಸಾಂಪ್ರದಾಯದಂತೆ ನವರಾತ್ರಿಯ ಮೊದಲ ದಿನ ಇಂದು ಅಂಬಾವಿಲಾಸ ಅರಮನೆಯ ದರ್ಬಾರ್ ಹಾಲ್​ನಲ್ಲಿ ಇರುವ ರತ್ನಖಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, ಸಿಂಹಾಸನಕ್ಕೆ ಸಿಂಹ ಜೋಡಣೆ ಮಾಡಿ ಖಾಸಗಿ ದರ್ಬಾರ್ ನಡೆಸಿದರು.

ಬೆಳಗ್ಗೆ ಶುಭ ಮುಹೂರ್ತದಲ್ಲಿ ಅರಮನೆಯಲ್ಲಿ ಹೋಮ ಹವನಗಳನ್ನು ನಡೆಸಿದ ಯದುವೀರ್ ನವರರಾತ್ರಿಯ ಕಂಕಣ ಧಾರಣೆ ಮಾಡಿ ನಂತರ ಅರಮನೆಯಲ್ಲಿ ಖಾಸಗಿ ದರ್ಬಾರ್​​ನ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಿರು. ಬಳಿಕ 12.15 ರಿಂದ 12.25 ವರೆಗಿನ ಶುಭ ಗಳಿಗೆಯಲ್ಲಿ ರತ್ನಖಚಿತ ಸಿಂಹಾಸನಾರೋಹಣ ಮಾಡಿ ಖಾಸಗಿ ದರ್ಬಾರ್ ನಡೆಸಿದರು. ನಂತರ 33 ದೇವಾಲಯಗಳಿಂದ ಬಂದ ಪ್ರಸಾದ ಹಾಗೂ ತೀರ್ಥ ಸೇವನೆ ಮಾಡಿದರು. ಬಳಿಕ ಅರಮನೆ ಆನೆಗಳು, ಕುದುರೆ, ಹಸು, ಒಂಟೆಗಳೊಂದಿಗೆ ಆಗಮಿಸಿ ಪೂಜೆ ಸಲ್ಲಿಸಿದರು.

andolanait

Recent Posts

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

39 seconds ago

ಓದುಗರ ಪತ್ರ: ಸಾಧಕರಿಗೆ ಸಂದ ಗೌರವ

ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…

4 hours ago

ಓದುಗರ ಪತ್ರ: ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಮುಂದಾಗಲಿ

ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…

4 hours ago

ಓದುಗರ ಪತ್ರ: ಡಿಜಿಟಲ್ ಲಗೇಜ್ ಲಾಕರ್ ಎಲ್ಲೆಡೆ ವಿಸ್ತರಿಸಲಿ

ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…

4 hours ago

ಮಗನ ನೆನಪಲ್ಲಿ ಪೋಷಕರ ಮಾದರಿ ಕಾರ್ಯ

ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…

4 hours ago

ಭತ್ತದ ಬೆಳೆಗೆ ಎಲೆ ಸುರುಳಿ-ಬೆಂಕಿ ರೋಗದ ಬಾಧೆ

ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ  ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…

4 hours ago