ಜಿಲ್ಲೆಗಳು

ನಾಳೆಯಿಂದ ‘ನನ್ನನ್ನು ಹತ್ಯೆಮಾಡಿ’ ಅಭಿಯಾನ: ಬಿಜೆವಿ

ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂಬ ಅಶ್ವತ್ಥ ನಾರಾಯಣ ಹೇಳಿಕೆಗೆ ಖಂಡನೆ

ಮೈಸೂರು: ಸಚಿವ ಅಶ್ವತ್ಥ ನಾರಾಯಣ ಅವರು ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂಬ ಹೇಳಿಕೆ ನೀಡಿರುವುದನ್ನು ಖಂಡಿಸಿ ಫೆ.25ರಿಂದ ‘ನನ್ನನ್ನು ಹತ್ಯೆಮಾಡಿ’ ಎಂಬ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ ವಿಜಯ್‌ ಕುಮಾರ್‌ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.25ರಂದು ನಗರದ ಕೋಟೆ ಆಂಜನೇಯ ದೇವಸ್ಥಾನದಿಂದ ಕಾಲ್ನಡಿಗೆ ಮೂಲಕ ಜಿಲ್ಲಾಧಿಕಾರಿ ಕಚೆರಿಗೆ ತೆರಳಿ ಮನವಿ ಸಲ್ಲಿಸಲಾಗುತ್ತದೆ. ಮೈಸೂರು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಕಾರ್ಯಕರ್ತರಿಂದ ಈ ಅಭಿಯಾನ ನಡೆಯಲಿದೆ ಎಂದು ತಿಳಿಸಿದರು.

ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಮಾತನಾಡಿ, ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ತೆರಳಿದ್ದ ಬಗ್ಗೆ ಸುಳ್ಳು ಹೇಳುವ ಶಾಸಕ ಸಿ.ಟಿ.ರವಿ ಅವರನ್ನು ಕ್ಷೇತ್ರದ ಜನರು ಮುಂದಿನ ಚುನಾವಣೆಯಲ್ಲಿ ಮನೆಗೆ ಕಳುಹಿಸುವುದು ಖಚಿತ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಮಾಂಸಾಹಾರ ಸೇವಿಸಿ ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಹೋಗಿದ್ದರು ಎಂದು ಆರೋಪ ಮಾಡಿದ್ದವರು ಇಂದು ಭಟ್ಕಳದ ಬಿಜೆಪಿ ಶಾಸಕ ಸುನೀಲ್ ನಾಯ್ಕ್ ಮನೆಯಲ್ಲಿ ಮಾಂಸಾಹಾರ ಸೇವಿಸಿ ಸ್ಥಳೀಯ ದೇವಾಲಯದ ರಾಜಾಂಗಣ ನಾಗಬನ ಹಾಗೂ ಕರಿಬಂಟ ದೇವಸ್ಥಾನಕ್ಕೆ ಭೇಟಿ ನೀಡಿರುವ ವೀಡಿಯೋ ಲಭ್ಯವಿದೆ ಎಂದು ಆರೋಪಿಸಿದರು.
ಒಂದು ವೇಳೆ ಸುಳ್ಳು ಹೇಳುವ ಸ್ಪರ್ಧೆ ಏರ್ಪಡಿಸಿದರೆ ಮೊದಲನೇ ಸ್ಥಾನವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಎರಡನೇ ಸ್ಥಾನವನ್ನು ಶಾಸಕ ಸಿ.ಟಿ.ರವಿ ಪಡೆಯುತ್ತಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಚಿಕ್ಕಮಗಳೂರು ಕ್ಷೇತ್ರಕ್ಕೆ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದ್ದೇವೆ. 2023 ರ ಚುನಾವಣೆ ನಂತರ ಸಿ.ಟಿ.ರವಿ ಮಾಜಿ ಶಾಸಕ ಎಂಬ ಬಿರುದಿನೊಂದಿಗೆ ಮನೆಗೆ ಹೋಗುವುದು ಖಚಿತ ಎಂದರು.

‘ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಬೇಕು’ ಎಂದು ಎಚ್.ಡಿ.ದೇವೇಗೌಡರು ಹೇಳಿದ್ದಕ್ಕೆ ‘ಮುಸ್ಲಿಂ ಧರ್ಮದಲ್ಲಿ ಪುನರ್ಜನ್ಮದ ಬಗ್ಗೆ ನಂಬಿಕೆ ಇಲ್ಲ. ಹಾಗಾಗಿ ಈಗಲೇ ಹೋಗಿಬಿಡಿ’ ಎಂದು ಹೇಳುವ ಸಿ.ಟಿ.ರವಿ ಅವರ ಮಾತಿನ ಅರ್ಥ ದೇವೆಗೌಡರು ಸಾಯಬೇಕು ಎಂದೇ ಎಂದು ಪ್ರಶ್ನಿಸಿದರು. ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿವಣ್ಣ, ಹುಣಸೂರು ಬಸವಣ್ಣ, ಮಾಧ್ಯಮ ಸಂಚಾಲಕ ಮಹೇಶ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

6 hours ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

8 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

8 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

8 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

8 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

8 hours ago