Light
Dark

ಗೋ ಬ್ಯಾಕ್‌ ಸಿದ್ದರಾಮಯ್ಯ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು 

ಮಡಿಕೇರಿ : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ  ಪ್ರವಾಸವನ್ನು ಕೈಗೊಂಡಿದ್ದಾರೆ.

ಈ ಸಂದರ್ಭದಲ್ಲಿ ಅವರಿಗೆ ಕೊಡಗಿನ ತಿತಿಮತಿಯ ಬಳಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಂದ ಘೇರಾವ್‌ ಹಾಕಿದ್ದಾರೆ.

ಮುಂದುವರಿದು ಗೋ ಬ್ಯಾಕ್‌ ಸಿದ್ದರಾಮಯ್ಯ ಎಂದು ಘೋಷಣೆ ಕೂಗುವ ಮೂಲಕ ಸಾವರ್ಕರ್‌ ಗೆ ಜೈಕಾರ ಹಾಕಿರುವ ಘಟನೆ ನಡೆದಿದೆ.

ಸಿದ್ದರಾಮಯ್ಯ ಅವರು ಕುಶಾಲನಗರದ ಮಳೆ ಹಾನಿ ಪ್ರದೇಶ ಸೇರಿದಂತೆ ಮಡಿಕೇರಿ, ಬಾಳೆಹೊನ್ನೂರಿನ ಕಡವಂತಿಯಲ್ಲಿ ಶಾಸಕ ರಾಜೇಗೌಡ ಅವರ ನಿವಾಸದಲ್ಲಿ ವಾಸ್ತವ್ಯ ಹೂಡಲಿದ್ದಾರೆ.ನಾಳೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಹಾಗೂ ಮೂಡಿಗೆರೆ ವಿಧಾನಸಭಾ ಕ್ಷೇತ್ರಗಳಿಗೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ