ಮಡಿಕೇರಿ: 24 ಗಂಟೆಗಳಲ್ಲಿ ಕೊಡಗಿನ ಇಬ್ಬರನ್ನು ಬಲಿ ಪಡೆದಿದ್ದ ನರಭಕ್ಷಕ ಹುಲಿಯನ್ನು ಕೊನೆಗೂ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಕೆ.ಬಾಡಗ ಗ್ರಾಮದ ಚೂರಿಕಾಡು ಎಂಬಲ್ಲಿ 24 ಗಂಟೆಯ ಒಳಗಡೆ ಇಬ್ಬರ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿತ್ತು. ಅರಣ್ಯ ಇಲಾಖೆಯ ವಿರುದ್ಧ ಗ್ರಾಮಸ್ಥರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ರಾಜ್ಯ ಸರ್ಕಾರ ಹುಲಿಯನ್ನು ಸೆರೆ ಹಿಡಿಯವಂತೆ ಸೋಮವಾರ ರಾತ್ರಿ ಅದೇಶ ಪ್ರಕಟಿಸಿತ್ತು.
ಈ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆಯಿಂದಲೇ ಹುಲಿ ಹಿಡಿಯಲು 5 ಸಾಕಾನೆಗಳ ಸಹಕಾರದೊಂದಿಗೆ 150ಕ್ಕೂ ಅಧಿಕ ಸಿಬ್ಬಂದಿ ಫೀಲ್ಡ್‌ಗೆ ಇಳಿದು ಕಾಫಿ ತೋಟದಲ್ಲಿ ಹುಡುಕಾಟ ನಡೆಸಿದ್ದರು. ಆದರೆ ಗ್ರಾಮದ ಯಾವುದೇ ತೋಟದಲ್ಲೂ ಹುಲಿ ಪತ್ತೆಯಾಗಿರಲಿಲ್ಲ. ಇದನ್ನೂ ಓದಿ: ಡೇಟಿಂಗ್ ಮಾಡುತ್ತಿದ್ದ 25ರ ಯುವತಿಯನ್ನು ಕೊಲೆ ಮಾಡಿ ಢಾಬಾದ ಫ್ರಿಜರ್‌ನಲ್ಲಿ ಬಚ್ಚಿಟ್ಟ
ಮಧ್ಯಾಹ್ನದ ಬಳಿಕ ಆಪರೇಷನ್ ಟೈಗರ್ ಅರಂಭ ಮಾಡಿದ ಅರಣ್ಯ ಇಲಾಖೆಯ ಸಿಬ್ಬಂದಿಗೆ ನಾಣಚ್ಚಿ ಗೇಟ್ ಸಮೀಪ ಹುಲಿಯ ಚಲನವಲನ ಪತ್ತೆಯಾಗಿತ್ತು. ಈ ಬೆನ್ನಲ್ಲೇ ದೂರದಿಂದಲೇ ಸಿಬ್ಬಂದಿ ಅರಿವಳಿಕೆಯನ್ನು ಶೂಟ್ ಮಾಡುವ ಮೂಲಕ ಪ್ರಜ್ಞೆ ತಪ್ಪಿಸಿ ಹುಲಿಯನ್ನು ಸೆರೆ ಹಿಡಿದಿದ್ದಾರೆ. ಸೆರೆಯಾದ ಹುಲಿಗೆ 8 ಅಥವಾ 9 ವರ್ಷ ಪ್ರಾಯವಾಗಿರಬಹುದು ಎಂದು ಅಂದಾಜಿಸಲಾಗಿದೆ.
ಈ ಹಿಂದೆ ಜಾನುವಾರುಗಳು ಮಾತ್ರ ಬಲಿಯಾಗುತ್ತಿದ್ದವು. ಆದರೆ ಈಗ ಜನರು ಹುಲಿಗೆ ಆಹಾರವಾಗುತ್ತಿದ್ದಾರೆ. ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದಲೇ ಮನುಷ್ಯರು ಬಲಿಯಾಗುತ್ತಿದ್ದಾರೆ. ಹುಲಿಯನ್ನು ಹೇಗಾದರೂ ಮಾಡಿ ಹಿಡಿಯಲೇಬೇಕೆಂದು ಗ್ರಾಮಸ್ಥರು ಪಟ್ಟು ಹಿಡಿದು ಆಗ್ರಹಿಸಿದ್ದರು.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…