ಜಿಲ್ಲೆಗಳು

ಕೊಡಗು : ವಿಜ್ಞಾನ ಶಿಕ್ಷಕ ಎಸ್.ಎಂ. ಇಬ್ರಾಹಿಂ ಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ನವೀನ್ ಡಿಸೋಜ

ರಾಜ್ಯಕ್ಕೆ ಮಾದರಿಯಾದ ವಿಜ್ಞಾನ ಪ್ರಯೋಗಾಲಯ ಮತ್ತು ಗ್ರಂಥಾಲಯ ಸ್ಥಾಪಿಸಿದ ಕೀರ್ತಿ

ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ನೇರುಗಳಲೆ ಸರ್ಕಾರಿ ಪ್ರೌಢಶಾಲಾ ವಿಜ್ಞಾನ ಶಿಕ್ಷಕ ಎಸ್.ಎಂ. ಇಬ್ರಾಹಿಂ ಅವರು ಈ ಸಾಲಿನ ಉತ್ತಮ ಶಿಕ್ಷಕ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಎಸ್.ಎಂ. ಇಬ್ರಾಹಿಂ ಕಳೆದ ೧೪ ವರ್ಷಗಳಿಂದ ನೇರುಗಳಲೆ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹಿರಿಯ ವರ್ತಕರಾದ ಮಹಮ್ಮದ್ ಶೇಖಮಲೆ ಹಾಗೂ ಸಾರಮ್ಮ ದಂಪತಿಗಳ ಎಂಬವರ ೨ನೇ ಪುತ್ರರಾಗಿರುವ ಇಬ್ರಾಹಿಂ ಪುತ್ತೂರು ಅರಿಯಡ್ಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಪೆರ್ನಾಜೆಯ ಸೀತಾರಾಘವ ಶಾಲೆಯಲ್ಲಿ ಪ್ರೌಢ ಶಿಕ್ಷಣ, ಪುತ್ತೂರು ಜೂನಿಯರ್ ಕಾಲೇಜಿನಲ್ಲಿ ಪಿಯು ಶಿಕ್ಷಣ ಪಡೆದಿದ್ದಾರೆ.

ವಿಜ್ಞಾನ ಶಿಕ್ಷಕ ಎಸ್.ಎಂ. ಇಬ್ರಾಹಿಂ ಏನು ಓದಿದ್ದಾರೆ ? 
ಸುಳ್ಯದ ನೆಹರು ಮೆಮೊರಿಯಲ್ ಕಾಲೇಜಿನಲ್ಲಿ ಪದವಿ ಶಿಕ್ಷಣ ಪೂರ್ಣಗೊಳಿಸಿರವ ಇಬ್ರಾಹಿಂ, ಮಂಗಳೂರು ವಿಶ್ವ ವಿದ್ಯಾನಿಲಯದ ಮಂಗಳಗಂಗೋತ್ರಿಯಲ್ಲಿ ಕೆಮೆಸ್ಟ್ರಿಯಲ್ಲಿ ಎಂಎಸ್‌ಸಿ ಪೂರ್ಣಗೊಳಿಸಿದ್ದಾರೆ. ಚಿಕ್ಕಮಗಳೂರಿನ ಎಂಎಲ್‌ಎಂಎನ್ ಕಾಲೇಜಿನಲ್ಲಿ ಬಿಎಡ್ ಶಿಕ್ಷಣವನ್ನು ಪಡೆದಿದ್ದಾರೆ.


ಕೇರಳದ ಖಾಸಗಿ ಶಾಲೆಯಲ್ಲಿ ೮ ವರ್ಷ ವಿಜ್ಞಾನ ಶಿಕ್ಷಕರಾಗಿ ಸೇವೆ ಸಲ್ಲಿಸಿರುವ ಇಬ್ರಾಹಿಂ, ಅಲ್ಲಿ ಮಾದರಿ ಪ್ರಯೋಗಾಲಯವೊಂದನ್ನು ಸ್ಥಾಪಿಸಿ ಸರ್ವರ ಮೆಚ್ಚುಗೆಗೆ ಪಾತ್ರರಾಗಿದ್ದರು. ನಂತರದಲ್ಲಿ ಸರ್ಕಾರಿ ಶಿಕ್ಷಕರಾಗಿ ೨೦೦ರ ಸೆಪ್ಟಂಬರ್‌ನಿಂದ ಕೊಡಗಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇಬ್ರಾಹಿಂ ಸದ್ಯ ಪುತ್ತೂರು ಸಮೀಪದ ಕೆಯ್ಯೂರು ಗ್ರಾಮದಲ್ಲಿ ನೆಲೆಸಿದ್ದು, ವಾರಕ್ಕೊಮ್ಮೆ ಮನೆಗೆ ಹೋಗಿ ಬರುತ್ತಿದ್ದಾರೆ.
ಇವರೊಬ್ಬ ಕ್ರಿಯಾಶೀಲ ಶಿಕ್ಷಕರಾಗಿದ್ದು, ನೇರುಗಳಲೆ ಶಾಲೆಯನ್ನು ಜಿಲ್ಲೆಯ ಉತ್ತಮ ಶಾಲೆಗಳ ಪಟ್ಟಿಯಲ್ಲಿ ಗುರುತಿಸುವಂತೆ ಕೆಲಸ ಮಾಡಿದ್ದಾರೆ. ಇವರ ಪ್ರಯತ್ನದಿಂದ ಶಾಲೆಯಲ್ಲಿ ರಾಜ್ಯಕ್ಕೆ ಮಾದರಿಯಾದ ವಿಜ್ಞಾನ ಪ್ರಯೋಗಾಲಯ ಮತ್ತು ಗ್ರಂಥಾಲಯ ಸ್ಥಾಪಿಸಿದ ಕೀರ್ತಿ ಹೊಂದಿದ್ದಾರೆ. ಕಳೆದ ೧೦ ವರ್ಷಗಳಿಂದ ಜಿಲ್ಲಾ ಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಪ್ರೌಢಶಾಲಾ ಶಿಕ್ಷಕರಿಗೆ ತರಬೇತಿ ನೀಡುತ್ತಿದ್ದಾರೆ. ಇವರ ಸಾಧನೆಯನ್ನು ಗುರುತಿಸಿ ೨೦೧೯-೨೦ನೇ ಸಾಲಿನ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.


ವಿಜ್ಞಾನ ಶಿಕ್ಷಕರಾಗಿರುವ ಇಬ್ರಾಹಿಂ ಕೇವಲ ವಿಜ್ಞಾನ ವಿಭಾಗ ಮಾತ್ರವಲ್ಲದೆ, ಇತರ ಬೋಧನಾ ವಿಷಯಗಳಲ್ಲೂ ತಮ್ಮ ನೈಪುಣ್ಯತೆ ಪ್ರದರ್ಶಿಸಿದ್ದಾರೆ. ಇವರ ಸಹಕಾರದಿಂದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಕೂಡಿಗೆಯಲ್ಲಿ ಅತ್ಯಾಕರ್ಷಕ ಸಮಾಜ ವಿಜ್ಞಾನ ಪ್ರಯೋಗಾಲಯವನ್ನು ನಿರ್ಮಿಸಲಾಗಿದೆ. ಮಾತ್ರವಲ್ಲದೆ ಕೊಡಗಿನ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಸಾಂಸ್ಕೃತಿಕ ಘಟಕ ನಿರ್ಮಾಣದಲ್ಲೂ ಪ್ರಮುಖ ಪಾತ್ರ ವಹಿಸಿದ್ದಾರೆ.
ಕೇವಲ ಶಿಕ್ಷಕ ವೃತ್ತಿಗೆ ಮಾತ್ರ ಸೀಮಿತವಾಗಿರದೆ ಇನ್ನೂ ಹತ್ತು ಕಲವಾರು ಸಮಾಜಿಕ ಕಾರ್ಯಗಳಲ್ಲಿ ಇಬ್ರಾಹಿಂ ತೊಡಗಿಸಿಕೊಂಡಿದ್ದಾರೆ. ಪರಿಸರ ಪ್ರೇಮಿಯಾಗಿರುವ ಇಬ್ರಾಹಿಂ ತನ್ನೂರು ಕೆಯ್ಯೂರಿನಲ್ಲಿ ಪೊರ್ಲುದ ಕೆಯ್ಯೂರು ವಿಷನ್ ೨೦೨೫ ಎನ್ನುವ ಸಂಘಟನೆಯಡಿಯಲ್ಲಿ ಊರ ಪರಿಸರ ಪ್ರೇಮಿಗಳೊಂದಿಗೆ ಸೇರಿಕೊಂಡು ಪ್ಲಾಸ್ಟಿಕ್ ಮುಕ್ತ ಮತ್ತು ಕಸಮುಕ್ತ ಗ್ರಾಮವಾಗಿಸಲು ಮತ್ತು ಹಸಿರು ಗ್ರಾಮವನ್ನಾಗಿಸಲು ಜಾಗೃತಿ ಮೂಡಿಸುತ್ತಿದ್ದಾರೆ.
ವಿಭಿನ್ನ ಕಲಿಕಾ ಶೈಲಿಯಿಂದ ಹೆಸರುವಾಸಿಯಾಗಿರುವ ಇಬ್ರಾಹಿಂ, ಸರಳ ಸಜ್ಜನಿಕೆಯ ವ್ಯಕ್ತಿಯೂ ಹೌದು. ಪ್ರಶಸ್ತಿ ಬಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಇಬ್ರಾಹಿಂ, ನಾನು ಕಷ್ಟ ಪಟ್ಟು ಮಾಡಿದ ಕೆಲಸಕ್ಕೆ ಸಿಕ್ಕ ಪ್ರತಿಫಲ ಇದು ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

andolanait

Recent Posts

ಅಡಕೆಗೆ ಎಲೆಚುಕ್ಕಿ, ಹಳದಿ ರೋಗ ಬಾಧೆ

ಕೊಡಗು ಜಿಲ್ಲೆಯಲ್ಲಿಯೂ ಕಾಣಿಸಿಕೊಳ್ಳುತ್ತಿರುವ ರೋಗ; ಹತೋಟಿಗೆ ಔಷಧಿ ಜೊತೆಗೆ ಸೂಕ್ತ ಪರಿಹಾರಕ್ಕೆ ಒತ್ತಾಯ ಮಡಿಕೇರಿ: ವಾಣಿಜ್ಯ ಬೆಳೆಯಾಗಿ ಕೃಷಿಕರ ಬದುಕಿಗೆ ಆಶ್ರಯವಾಗಿರುವ…

19 mins ago

ಸಾರ್ವಜನಿಕ ಶೌಚಾಲಯ ‘ಎರಡೂ’ ಬಂದ್!

ಚಾ.ನಗರದ ತರಕಾರಿ ಮಾರುಕಟ್ಟೆ, ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಮುಚ್ಚಿದ ಶೌಚಾಲಯಗಳು; ಜನರಿಗೆ ಸಮಸ್ಯೆ ಚಾಮರಾಜನಗರ: ನಗರದಲ್ಲಿನ ಎರಡು ಸಾರ್ವಜನಿಕ…

53 mins ago

30 ಹಾಡಿಗಳಿಗೂ ಅರಣ್ಯ ಹಕ್ಕು ಪತ್ರಗಳನ್ನು ನೀಡಲು ಆಗ್ರಹ

ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…

3 hours ago

ದಶಕದಿಂದ ಕಾದಿದ್ದ ವಿದ್ಯಾರ್ಥಿಗಳ ವನವಾಸಕ್ಕೆ ಮುಕ್ತಿ!

ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ…

3 hours ago

ಎಚ್.ಡಿ.ಕೋಟೆ ಪೊಲೀಸ್ ಕ್ಯಾಂಟೀನ್ ಬಂದ್

ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ  ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…

3 hours ago

300 ಸಿಎ ನಿವೇಶನಗಳ ಹಂಚಿಕೆಗೆ ಎಂಡಿಎ ನಿರ್ಧಾರ

ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ  ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…

3 hours ago