ಮಡಿಕೇರಿ: ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಜಿಲ್ಲಾ ಸಮಿತಿ, ತಾಲ್ಲೂಕು ಸಮಿತಿ ಹಾಗೂ ಹೋಬಳಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರ ಸಭೆುಂಲ್ಲಿ ಜಿಲ್ಲಾ ಕೇಂದ್ರದಲ್ಲಿ ತುಳು ಸಮ್ಮೇಳನ ನಡೆಸಲು ನಿರ್ಧರಿಸಲಾಯಿತು.
ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಕೂಟದ ಜಿಲ್ಲಾಧ್ಯಕ್ಷ ಬಿ.ಬಿ.ಐತ್ತಪ್ಪ ರೈರವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಜಿಲ್ಲೆಯಲ್ಲಿ 15ಕ್ಕೂ ಹೆಚ್ಚು ತುಳು ಭಾಷಿಕ ಸಮುದಾಯಗಳಿದ್ದು, ಸುಮಾರು 1.50 ಲಕ್ಷಕ್ಕಿಂತಲೂ ಹೆಚ್ಚು ತುಳು ಭಾಷಿಕರಿದ್ದಾರೆ. ಎಲ್ಲ ತುಳು ಸಮುದಾಯವನ್ನು ಒಂದೇ ವೇದಿಕೆಯಡಿ ತರಲು ತುಳು ಸಮ್ಮೇಳನ ನಡೆಸುವುದು ಸೂಕ್ತ ಎಂದು ಅಧ್ಯಕ್ಷ ಬಿ.ಬಿ.ಐತ್ತಪ್ಪ ರೈ ಅಭಿಪ್ರಾಯ ವ್ಯಕ್ತಪಡಿಸಿದರು.
ಕೂಟದ ಸ್ಥಾಪಕ ಕಾರ್ಯದರ್ಶಿ ಹರೀಶ್ ಆಳ್ವ ಮಂಗಳೂರು, ಜಿಲ್ಲಾ ಉಪಾಧ್ಯಕ್ಷ ಬಿ.ವೈ.ಆನಂದ ರಘು, ಸಂಘಟನಾ ಕಾರ್ಯದರ್ಶಿ ರಾಜೀವ್ ಲೋಚನ, ಖಜಾಂಚಿ ಪ್ರಭು ರೈ, ಮಡಿಕೇರಿ ನಗರ ಅಧ್ಯಕ್ಷೆ ಸಾವಿತ್ರಿ, ವಿರಾಜಪೇಟೆ ತಾಲ್ಲೂಕು ಅಧ್ಯಕ್ಷ ಶಬರಿ ಶೆಟ್ಟಿ, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಪ್ರಶಾಂತ್, ಮಡಿಕೇರಿ ತಾಲ್ಲೂಕು ಸಂಚಾಲಕ ಪ್ರಸಾದ್ ಬಿಳಿಗೇರಿ, ಉಪಾಧ್ಯಕ್ಷ ಪಿ.ಸಿ.ಲೋಹಿತ್, ತುಳುವೆರ ಜನಪದ ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಎಂ.ರವಿ, ವಿವಿಧ ಘಟಕಗಳ ಪ್ರಮುಖರು ಉಪಸ್ಥಿತರಿದ್ದರು.
ವಿಧಾನಸಭೆ : ನಗರಾಭಿವೃದ್ಧಿ ಇಲಾಖೆಯಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಒಳಚರಂಡಿ ಮತ್ತು ಅದಕ್ಕೆ ಸಂಬಂಧಿಸಿದ ಸೇವೆಗಳ ನಿರ್ವಹಣೆ ಅಸಾಧ್ಯ ಎಂದು…
ಹುಣಸೂರು : ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹಲವು ಗ್ರಾಮಗಳಲ್ಲಿ ನಡೆಯುತ್ತಿರುವ ನಿರಂತರ ಹುಲಿ ದಾಳಿಗಳ ಹಿನ್ನೆಲೆಯಲ್ಲಿ ರೈತರು ಅಂತರರಾಜ್ಯ…
ಮೈಸೂರು : ಪ್ರಾಚೀನ ಕಾಲದಲ್ಲಿ ವ್ಯಾಸ, ವಾಲ್ಮೀಕಿ, ಕಾಳಿದಾಸರಂತಹ ಮಹಾನ್ ಕವಿಗಳು ರಚಿಸಿದ ಮಹಾನ್ ಗ್ರಂಥಗಳ ಫಲವಾಗಿ ಭಾರತೀಯ ಸಾಹಿತ್ಯ…
ಹೊಸದಿಲ್ಲಿ : ಒಲಿಂಪಿಕ್ ಕನಸನ್ನು ಬೆನ್ನಟ್ಟಲು 18 ತಿಂಗಳ ವಿರಾಮದ ನಂತರ ಮತ್ತೆ ವಾಪಸ್ಸಾಗುವುದಾಗಿ ಕುಸ್ತಿಪಟು ವಿನೇಶ್ ಫೋಗಟ್ ಘೋಷಿಸಿದ್ದಾರೆ.…
ಬೆಳಗಾವಿ : ಡಿನ್ನರ್ ಮೀಟಿಂಗ್ ಗಳ ಮೂಲಕ ತಾವು ಶಕ್ತಿ ಪ್ರದರ್ಶನ ಮಾಡುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ…
ಬೆಳಗಾವಿ : ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟ 50 ಸಾವಿರ ಕೋಟಿ ಅನುದಾನ ದುರುಪಯೋಗವಾಗಿದೆ ಎಂದು…