ಜಿಲ್ಲೆಗಳು

ಕುವೈತ್‌ನಲ್ಲಿ ಅತಂತ್ರ ಸ್ಥಿತಿಯಲ್ಲಿ ಕೊಡಗಿನ ಮಹಿಳೆ

ಮಡಿಕೇರಿ: ಮಧ್ಯವರ್ತಿಯ ವಂಚನೆಗೆ ಸಿಲುಕಿ ಕುವೈತ್‌ನಲ್ಲಿ ಅತಂತ್ರ ಸ್ಥಿತಿಯಲ್ಲಿರುವ ಸಿದ್ದಾಪುರದ ಕರಡಿಗೋಡು ಗ್ರಾಮದ ಪಾರ್ವತಿ ಅವರ ರಕ್ಷಣೆಗೆ ಕೊಡಗು ಜಿಲ್ಲಾಡಳಿತ ಮುಂದಾಗಿದೆ.
ವಿಸಿಟಿಂಗ್ ವೀಸಾ ಅವಧಿ ಮುಗಿದ ಹಿನ್ನೆಲೆಯಲ್ಲಿ ನಾನು ಸೇರಿದಂತೆ ಐವರು ಮಹಿಳೆಯರನ್ನು ಒಂದು ಹಾಸ್ಟೆಲ್ ಕೊಠಡಿಯಲ್ಲಿ ಕೂಡಿ ಹಾಕಲಾಗಿದ್ದು, ಯಾರನ್ನೂ ಸಂಪರ್ಕಿಸಲು ಅವಕಾಶವಿಲ್ಲ ಎಂದು ಪಾರ್ವತಿ ಆಡಿಯೊ ಮೂಲಕ ತಿಳಿಸಿದ್ದಾರೆ. ತಮ್ಮನ್ನು ಕೂಡಿ ಹಾಕಿರುವ ಕಟ್ಟಡದಿಂದ ಹೊರಗೆ ಕಾಣುವ ಪರಿಸರವ ಚಿತ್ರವನ್ನೂ ಕಳುಹಿಸಿದ್ದಾರೆ. ಆಕೆಯ ಮನೆಯವರು ಕೊಡಗು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದು, ಜಿಲ್ಲಾಡಳಿತ ಈಗಾಗಲೇ ಕುವೈತ್‌ ಭಾರತೀಯ ರಾಯಭಾರಿ ಕಚೇರಿಗೂ ಸಂಪರ್ಕಿಸಿ ಪಾರ್ವತಿಯ ಸ್ಥಿತಿಗತಿಯ ಬಗ್ಗೆ ವಿಚಾರಿಸಲು ಮನವಿ ಮಾಡಿದೆ.
ಪಾರ್ವತಿ ಅವರ ತಾಯಿ ಚಿಕ್ಕಿ ಅವರ ಮನವಿ ಸ್ವೀಕರಿಸಿದ ಜಿಲ್ಲಾಡಳಿತ ತಕ್ಷಣ ಕಾರ್ಯಪ್ರವೃತ್ತವಾಗಿದ್ದು, ಜಿಲ್ಲಾಧಿಕಾರಿ ಬಿ.ಸಿ ಸತೀಶ ಅವರ ನಿರ್ದೇಶನದ ಮೇರೆಗೆ ಪಾರ್ವತಿಯನ್ನು ಸುರಕ್ಷಿತವಾಗಿ ಕರೆತರುವ ಜವಾಬ್ದಾರಿಯನ್ನು ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ಅನನ್ಯ ವಾಸುದೇವ್ ಅವರ ಹೆಗಲಿಗೆ ವಹಿಸಿದೆ. ವಿಷಯದ ಬಗ್ಗೆ ಕುವೈಟ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ಮಾಹಿತಿ ನೀಡಿರುವ ಅನನ್ಯ ವಾಸುದೇವ್ ಸಂತ್ರಸ್ತೆಯೊಂದಿಗೆ ಸಂಪರ್ಕದಲ್ಲಿದ್ದು ಧೈರ್ಯ ತುಂಬಿದ್ದಾರೆ. ಅಲ್ಲದೇ ತಾಂತ್ರಿಕ ಕ್ರಮಗಳನ್ನು ಕೈಗೊಂಡಿದ್ದು, ಸಂತ್ರಸ್ತೆಯನ್ನು ಸುರಕ್ಷಿತವಾಗಿ ಕರೆತರುವ ಪ್ರಯತ್ನದಲ್ಲಿದ್ದಾರೆ.

ಯಾರು ಈ ಮಹಿಳೆ?: ಕುಶಾಲನಗರ ತಾಲೂಕು ನೆಲ್ಲಿಹುದಿಕೇರಿ ಗ್ರಾಮದ ಕರಡಿಗೋಡು ನಿವಾಸಿ ಚಿಕ್ಕಿ ಎಂಬುವವರ ಪುತ್ರಿ ಪಾರ್ವತಿ ಕೇರಳದ ಕಣ್ಣೂರು ಜಿಲ್ಲೆಯ ತಲಚೇರಿಯಲ್ಲಿ ಮನೆ ಕೆಲಸಕ್ಕೆ ಸೇರಿದ್ದರು. ಅಲ್ಲಿ ತಮಿಳುನಾಡು ಏಜೆಂಟ್ ಹನೀಫ್ ಮೂಲಕ ವಿದೇಶದಲ್ಲಿ ಮನೆ ಕೆಲಸ ಮಾಡಲು ಕಳೆದ ಸೆ.೩ರಂದು ಕರಡಿಗೋಡಿನಿಂದ ಹೊರಟು ಸೆ.೪ಕ್ಕೆ ಕುವೈತ್‌ ಗೆ ಬಂದಿದ್ದರು ಪಾರ್ವತಿ. ಅಲ್ಲಿ ಭಾರತದ ಏಜೆಂಟ್ ಮೂಲಕ ಕುವೈತ್‌ನ ಶ್ರೀಲಂಕಾದ ಏಜೆಂಟ್ ಸಮೀರ್ ಎಂಬಾತನನ್ನು ಸಂಪರ್ಕಿಸಿ ಕೆಲಸಕ್ಕೆ ಸೇರಿದ್ದರು.
ಕುವೈತ್‌ನ ಅರಬ್ ವ್ಯಕ್ತಿಯೊಬ್ಬರ ಮನೆಗೆ ಕೆಲಸಕ್ಕೆ ಸೇರಿದ ಪಾರ್ವತಿಗೆ ಅಲ್ಲಿ ನಿತ್ಯ ಕಿರುಕುಳ ನೀಡಲಾಗುತ್ತಿದೆ ಎಂದು ದೂರಲಾಗಿದೆ. ಅಲ್ಲಿ ತಮ್ಮನ್ನು ಕೀಳಾಗಿ ನಡೆಸಿಕೊಳ್ಳಲಾಗುತ್ತಿತ್ತು. ಹೀಗಾಗಿ ಕೆಲಸ ಮಾಡುವುದಿಲ್ಲ ಎಂದು ಇವರು ಹೇಳಿದ್ದಾರೆ. ಇದಕ್ಕೆ ಅರಬ್ಬಿ ಇವರ ವೀಸಾ ಮತ್ತು ಪಾಸ್‌ಪೋರ್ಟನ್ನು ಕಿತ್ತುಕೊಂಡಿದ್ದಾನೆ. ತಾನು ಏಜೆಂಟ್‌ಗೆ ನೀಡಿರುವ ಮೂರು ಲಕ್ಷ ರೂ. ಮರಳಿಸಿದರೆ ಮಾತ್ರ ಅದನ್ನು ನೀಡುತ್ತೇನೆ ಎಂದು ಆತ ಹೇಳಿದ್ದಾನೆ ಎನ್ನಲಾಗಿದೆ. ಈ ನಡುವೆ ಮಾಲೀಕನ ಜತೆ ಕಿರಿಕ್ ಮಾಡಿಕೊಂಡ ಪಾರ್ವತಿಯನ್ನು ಬೇರೊಬ್ಬ ಭಾರತೀಯನ ಮನೆಗೆ ಕೆಲಸಕ್ಕೆ ಸೇರಿಸುವ ಭರವಸೆ ನೀಡಲಾಗಿದೆಯಾದರೂ ಅಲ್ಲಿಂದ ಕಳುಹಿಸಿದ್ದು ಒಂದು ಹಾಸ್ಟೆಲ್‌ಗೆ ಎಂದು ಆರೋಪಿಸಲಾಗಿದೆ.
ಆ ಹಾಸ್ಟೆಲ್ ನಲ್ಲಿ ಈಗಾಗಲೇ ಶ್ರೀಲಂಕಾದ ನಾಲ್ವರು ಮಹಿಳೆಯರನ್ನು ಅಲ್ಲಿ ಕೂಡಿಡಲಾಗಿದೆಯೆಂದು, ಅಲ್ಲದೆ ಶ್ರೀಲಂಕಾ ಮೂಲದ ಮಹಿಳೆಯೊಬ್ಬರು ಅಲ್ಲಿಂದ ತಪ್ಪಿಸಿಕೊಂಡು ಹೋದಳು ಎಂದು ಪಾರ್ವತಿ ಆಡಿಯೋ ಮೂಲಕ ಆತಂಕ ವ್ಯಕ್ತಪಡಿಸಿದ್ದಾರೆ.
ಈಗ ಕೂಡಿಟ್ಟಿರುವ ಕಡೆ ದಿನಕ್ಕೆ ಒಮ್ಮೆ ಮಾತ್ರ ಊಟ ನೀಡುತ್ತಿದ್ದು ಹಸಿವಿನಿಂದ ಬಳಲುವಂತಾಗಿದೆ ಎಂದು ಸಂತ್ರಸ್ಥೆ ನೋವು ತೋಡಿಕೊಂಡಿದ್ದಾರೆ. ಬೆಳಿಗ್ಗೆ ಒಂದು ಲೋಟ ಟೀ ನೀಡಿದರೆ ಬಳಿಕ ಮೂರು ಗಂಟೆಗೆ ಸ್ವಲ್ಪ ತಿನ್ನಲು ಏನಾದರು ನೀಡುತ್ತಾರೆ. ಇಲ್ಲಿಂದ ಹೊರಗೆ ಹೋಗಲು ಅನುಮತಿಯಿಲ್ಲ. ಎಲ್ಲಾ ಬಾಗಿಲುಗಳಿಗೂ ಬೀಗ ಹಾಕಲಾಗಿದೆ. ಇಲ್ಲಿಂದ ಎಲ್ಲಿಗೂ ಹೋಗದಂತ ಪರಿಸ್ಥಿತಿ ನಿರ್ಮಾಣವಾಗಿದ್ದು ಆದಷ್ಟು ಬೇಗ ಭಾರತಕ್ಕೆ ಮರಳುವಂತಾಗಲು ಸಹಾಯ ಮಾಡಿ ಎಂದು ಫೋನಿನ ಮೂಲಕ ಗೋಗರೆಯುತ್ತಿದ್ದಾರೆ.


ಪಾರ್ವತಿ ಎಂಬವರ ಕುಟುಂಬಸ್ಥರು ನೀಡಿದ ಮನವಿ ಮೇರೆಗೆ ಕೊಡಗು ಜಿಲ್ಲಾಡಳಿತದಿಂದ ಕುವೈತ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯನ್ನು ಸಂಪರ್ಕಿಸಲಾಗಿದೆ. ಪಾರ್ವತಿ ಅವರನ್ನು ಮೊದಲು ಸುರಕ್ಷಿತವಾಗಿ ಕೊಡಗಿಗೆ ಕರೆತರುವ ಪ್ರಯತ್ನ ಮಾಡಲಾಗುತ್ತಿದೆ. ಪಾರ್ವತಿ ಬಂದ ಬಳಿಕ ಈ ಬಗ್ಗೆ ತನಿಖೆ ನಡೆಯಲಿದೆ.
–ಅನನ್ಯ ವಾಸುದೇವ್, ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ

andolanait

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

5 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

6 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

8 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

10 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

10 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

10 hours ago