ಮಡಿಕೇರಿ: ಕೇಂದ್ರ ಸರ್ಕಾರ ಕರಿಮೆಣಸು ಬೆಳೆಗಾರನಿಗೆ ವಿಧಿಸಿದ್ದ ಸರಕು ಮತ್ತು ಸೇವಾ ತೆರಿಗೆ (GST)ಯನ್ನು ಸಂಪೂರ್ಣ ತೆಗೆದುಹಾಕಲು ಸಹಕಾರ ನೀಡಿದ ಸಂಸದ ಯದುವೀರ್ ಅವರಿಗೆ ಜಿಲ್ಲೆಯ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕೊಡಗಿನ ಗೋಣಿಕೊಪ್ಪ ಬೆಳೆಗಾರರೊಬ್ಬರಿಗೆ 1 ಕೋಟಿ GST ಕಟ್ಟುವಂತೆ ಕೇಂದ್ರ ಸರ್ಕಾರದಿಂದ ನೋಟಿಸ್ ಬಂದಿತ್ತು. ಬಳಿಕ ಅವರು ಕರ್ನಾಟಕ ಕಾಫಿ ಬೆಳೆಗಾರರ ಸಂಘ, ಕೊಡಗು ಪ್ಲಾಂಟರ್ಸ್ ಅಸೋಸಿಯೇಶನ್ ನಿಯೋಗದೊಂದಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮತಾಜ ಒಡೆಯರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.
ಈ ಸಂಬಂಧ ಸಂಸದ ಯದುವೀರ್ ಅವರು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮಾಹಿತಿ ನೀಡಿದ್ದರು.
ಅದರಂತೆ ಕೇಂದ್ರ ಸರ್ಕಾರ ಕರಿಮೆಣಸಿಗೆ ವಿಧಿಸಿದ್ದ ಜಿಎಸ್‌ಟಿಯನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ. ಈ ಹಿನ್ನಲೆ ವಿವಿಧ ಬೆಳೆಗಾರರ ಸಂಘಟನೆಗಳು ಸಂಸದ ಯದುವೀರ್ ಒಡೆಯರ್ ಅವರಿಗೆ ಧನ್ಯವಾದ ತಿಳಿಸಿವೆ.





