ಕೊಡಗು: ಜಿಲ್ಲೆಯ ಕುಶಾಲನಗರದ ಹಾರಂಗಿ ಜಲಾಶಯದಿಂದ ಒಂದು ಸಾವಿರ ಕ್ಯೂಸೆಕ್ ನೀರನ್ನು ಮಂಗಳವಾರ (ಜುಲೈ. 9) ಬಿಡುಗಡೆ ಮಾಡಿದ್ದಾರೆ.
ಕಳೆದ ಎರಡು-ಮೂರು ದಿನಗಳಿಂದ ಬೆಂಬಿಡದೇ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಲಾಶಯಕ್ಕೆ ಅಧಿಕ ಮಟ್ಟದ ನೀರು ಹರಿದು ಬರುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲಾಡಳಿತ ಈ ನಿರ್ಧಾರ ತೆಗೆದುಕೊಂಡಿದೆ.
ಇಂದು ಸಂಜೆ 4 ಕ್ರಸ್ಟ್ ಗೇಟ್‌ಗಳನ್ನು ತೆಗೆದು ಹಾರಂಗಿ ಜಲಾಶಯದಿಂದ ಒಂದು ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ.
ಜಲಾಶಯ ತುಂಬಲು ಇನ್ನು ಕೇವಲ 10 ಅಡಿಗಳ ಅವಶ್ಯಕತೆಯಿದೆ. ಈಗಾಗಲೇ ಜಿಲ್ಲೆಯಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿದ್ದು, ನದಿ ತಟದ ಜನರೆಲ್ಲಾ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತ ಸೂಚನೆ ಹೊರಡಿಸಿತ್ತು. ಇದರ ಬೆನ್ನಲ್ಲೇ ಮಳೆ ತೀವ್ರತೆ ಪಡೆದುಕೊಂಡ ಹಿನ್ನೆಲೆ ಹಾರಂಗಿ ಜಲಾಶಯ ಭರ್ತಿಯಾಗುವ ಮುನ್ನವೇ ನೀರನ್ನು ಹೊರಬಿಡಲಾಗಿದೆ.
ಹವಾಮಾನ ಇಲಾಖೆ ವರದಿ ಪ್ರಕಾರ ಕೊಡಗು ಜಿಲ್ಲೆಯಾದ್ಯಂತ ವಾಡಿಕೆಗಿಂತ ಅಧಿಕ ಮಳೆ ಬರುವ ಮುನ್ಸೂಚನೆ ನೀಡಲಾಗಿದ್ದು, ಎನ್‌ಡಿಆರ್‌ಎಫ್ ತಂಡ ಹಾಗೂ ಜಿಲ್ಲಾಡಳಿತ ಪ್ರವಾಹ ತಡೆಗಟ್ಟಲು ಸಕಲ ಸಿದ್ಧತೆ ಮಾಡಿಕೊಂಡಿದೆ.
ಹಾರಂಗಿ ಜಲಾಶಯದ ನೀರಿನ ಮಟ್ಟ:
ಗರಿಷ್ಠ ಮಟ್ಟ: 2,848.76 ಅಡಿ
ಇಂದಿನ ಮಟ್ಟ: 2,849.30 ಅಡಿ
ನಿನ್ನೆ ಮಟ್ಟ: 2,848.76 ಅಡಿ
ಒಳ ಹರಿವು: 2,121 ಕ್ಯೂಸೆಕ್
ಹೊರ ಹರಿವು: 700 ಕ್ಯೂಸೆಕ್
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…