Harangi reservoir
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಹೊರಹರಿವನ್ನು 15,000 ಕ್ಯೂಸೆಕ್ಸ್‌ಗೆ ಹೆಚ್ಚಳ ಮಾಡಲಾಗಿದೆ.
ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯಕ್ಕೆ ಕ್ಷಣಕ್ಷಣಕ್ಕೂ ಒಳಹರಿವು ಹೆಚ್ಚಾಗುತ್ತಿದೆ. ಇದೀಗ ಜಲಾಶಯದಿಂದ 15,000 ಕ್ಯೂಸೆಕ್ಸ್ ನೀರನ್ನು ಹರಿಬಿಟ್ಟಿದ್ದು, ಜಲಾಶಯದ ಎದುರು ಇರುವ ಸೇತುವೆ ಮುಳುಗಡೆಯಾಗಿದೆ. ಪರಿಣಾಮ ವಾಹನ ಸಂಚಾರವನ್ನು ಸ್ಥಗಿತ ಮಾಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಜಲಾಶಯದಿಂದ ಹೊರಹರಿವನ್ನು ಹೆಚ್ಚಳ ಮಾಡಿರುವ ಹಿನ್ನೆಲೆಯಲ್ಲಿ ನದಿ ಪಾತ್ರದಲ್ಲಿರುವ ಜನರು ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…
ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…
ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…
ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…
ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…
ಇಸ್ಲಾಮಾಬಾದ್: ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…