ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ ನೀಡಿದರೂ ಮಂಗಳವಾರ ಬೆಳಗ್ಗೆ 9.50ಕ್ಕೆ ಮೃತಪಟ್ಟಿದೆ.
ಕಾದಾಟದ ಗಾಯಗಳು ಹಾಗೂ ಮುರಿದ ದಂತದೊಂದಿಗೆ ಶಿಬಿರಕ್ಕೆ ಆಗಮಿಸಿದ್ದ ಆನೆಯನ್ನು ಅರಣ್ಯ ಇಲಾಖೆಯ ಪಶುವೈದ್ಯರು ಪ್ರತ್ಯೇಕವಾಗಿಟ್ಟು (ಕ್ವಾರಂಟೈನ್) ಚಿಕಿತ್ಸೆ ನೀಡುತ್ತಿದ್ದರು. ಪ್ರತಿದಿನ ಆ್ಯಂಟಿಬಯೋಟಿಕ್ಸ್, ನೋವು ನಿವಾರಕ, ಗಾಯಕ್ಕೆ ಔಷಧೋಪಚಾರ ಹಾಗೂ ಅಗತ್ಯ ಪೋಷಕಾಂಶಗಳನ್ನು ನೀಡಲಾಗುತ್ತಿತ್ತು.
ಹೆಚ್ಚಿನ ತಜ್ಞ ಚಿಕಿತ್ಸೆಗೆ ‘ವೈಲ್ಡ್‌ಲೈಫ್ ಎಸ್‌ಒಎಸ್’ ಸಂಸ್ಥೆಯ ವನ್ಯಜೀವಿ ಪಶುವೈದ್ಯರ ತಂಡದ ಸಹಯೋಗದಲ್ಲಿ ಆರೋಗ್ಯ ತಪಾಸಣೆ ನಡೆಸಲಾಗಿತ್ತು. ಡಿಜಿಟಲ್ ಎಕ್ಸ್‌ರೇಯಲ್ಲಿ ಆನೆಯ ಎಡ ಮೊಣಕೈ ಮೂಳೆಯಲ್ಲಿ ಬಿರುಕು ಇರುವುದು ದೃಢಪಟ್ಟಿತ್ತು. ತಜ್ಞರ ಸಲಹೆಯಂತೆ ಸುಧಾರಿತ ಚಿಕಿತ್ಸೆ ಮುಂದುವರಿಸಲಾಗಿದ್ದು, ಕಾಲಿನ ಮೇಲಿನ ಒತ್ತಡ ಕಡಿಮೆ ಮಾಡಲು ಆನೆಯನ್ನು ಕ್ರಾಲ್‌ನಿಂದ ಹೊರಗೆ ಬಿಡಲಾಗಿತ್ತು. ಸೆ.27ರಂದು ಪೆಟ್ಟಾದ ಕಾಲನ್ನು ಸ್ಥಿರವಾಗಿಡಲು ಫೈಬರ್‌ಗ್ಲಾಸ್ ಬ್ಯಾಂಡೇಜ್ ಅಳವಡಿಸಲಾಗಿತ್ತು.
ಮಂಗಳವಾರ ಆನೆ ಏಕಾಏಕಿ ಕುಸಿದುಬಿದ್ದಿದ್ದು, ತಕ್ಷಣವೇ ಗ್ಲುಕೋಸ್ ಹಾಗೂ ದ್ರವ ಚಿಕಿತ್ಸೆ ನೀಡಿ ತೀವ್ರ ನಿಗಾ ವಹಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ. ಸಾವಿನ ನಿಖರ ಕಾರಣ ಪತ್ತೆಹಚ್ಚಲು ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ದೀರ್ಘಕಾಲದ ಮೂಳೆ ಮುರಿತ, ನಿರಂತರ ಅನಾರೋಗ್ಯ ಹಾಗೂ ದೈಹಿಕ ದೌರ್ಬಲ್ಯದಿಂದಾಗಿ ಸಾವು ಸಂಭವಿಸಿರಬಹುದು ಎಂದು ಪ್ರಾಥಮಿಕ ಪಶುವೈದ್ಯಕೀಯ ವರದಿಯಲ್ಲಿ ತಿಳಿಸಲಾಗಿದೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…