ಕೊಡಗು

ಕೋಟೆ ಬೆಟ್ಟಕ್ಕೆ ಬಂದಿದ್ದ ಪ್ರವಾಸಿಗರ ಮೇಲೆ ಹಲ್ಲೆ; ಚಿನ್ನದ ಸರ ಕದ್ದೊಯ್ದ ಆರೋಪಿಗಳು

ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕೋಟೆ ಬೆಟ್ಟಕ್ಕೆ ಕುಟುಂಬ ಸಮೇತ ಪ್ರವಾಸಕ್ಕೆ ಬಂದಿದ್ದವರ ಮೇಲೆ ಬೈಕ್‌ನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಗಲಾಟೆ ಮಾಡಿ, ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

ರಸ್ತೆಯಲ್ಲಿ ಹೋಗುವ ವಿಚಾರಕ್ಕೆ ಗಲಾಟೆ ಶುರು ಮಾಡಿದ್ದು, ನಂತರ ಹೆಲ್ಮೆಟ್‌ನಿನಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆಯ ದೃಶ್ಯ ಮೊಬೈಲ್‌ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಮಕ್ಕಳು ಹಾಗೂ ಮಹಿಳೆಯರು ಭಯದಿಂದ ಚೀರಾಡುತ್ತಿರುವುದು ಮೊಬೈಲ್‌ನಲ್ಲಿ ಸೆರೆಯಾಗಿರುವ ದೃಶ್ಯದಲ್ಲಿ ಕಾಣಿಸುತ್ತಿದೆ.

ಪುತ್ತೂರಿನಿಂದ ಮಕ್ಕಳು, ಮಹಿಳೆಯರು ಸೇರಿದಂತೆ ಕುಟುಂಬ ಸಮೇತ ಪ್ರವಾಸಕ್ಕೆಂದು ಸೋಮವಾರಪೇಟೆಯ ಕೋಟೆಬೆಟ್ಟಕ್ಕೆ ಆಗಮಿಸಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಇಬ್ಬರು ಪುಂಡರು ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿರುವ ಆರೋಪಿಗಳಿಬ್ಬರು ಮಾದಾಪುರ ಸಮೀಪದ ನಿವಾಸಿಗಳೆಂಬ ಶಂಕೆ ವ್ಯಕ್ತವಾಗಿದೆ.

ಆರೋಪಿಗಳು ಹಲ್ಲೆ ಮಾಡಿದ್ದ ಸ್ಥಳದಲ್ಲೇ ಪ್ರವಾಸಿಗರ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದವರು ಮಾದಾಪುರ ಉಪ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

andolana

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

1 hour ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

1 hour ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

1 hour ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

1 hour ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

2 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

2 hours ago