ಮಡಿಕೇರಿ : ಮನೆಯ ಸಾಕುನಾಯಿಗಳು ಯಾವುದೇ ವ್ಯಕ್ತಿಗಳ ಮೇಲೆ ದಾಳಿ ಮಾಡಿರುವ ಘಟನೆ ಕಂಡುಬಂದಲ್ಲಿ ಆ ನಾಯಿಯ ಮಾಲಕರ ಮೇಲೆ Section: 289 IPC ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಹಾಗೂ ಆರು ತಿಂಗಳ ಜೈಲುವಾಸ ಶಿಕ್ಷೆ ಮತ್ತು ದಂಡ ವಿಧಿಸಲಾಗುವುದು ಎಂದು ಕೊಡಗು ಪೊಲೀಸ್ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.
ಸಾಕುನಾಯಿ ದಾಳಿ ಮಾಡಿರುವ ಪ್ರಕರಣಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ 112ಗೆ ಕರೆ ಮಾಡುವಂತೆ ಹಾಗೂ ಕೆ.ಎಸ್.ಪಿ. ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಮಾಹಿತಿ ಒದಗಿಸುವವರ ವಿವರ ಬಹಿರಂಗಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಕರಣ ದಾಖಲು : ಈ ನಡುವೆ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕೊಣಂಜಗೇರಿ ಪಾರಾಣೆ ಗ್ರಾಮದಲ್ಲಿ ಬುಧವಾರ ಆರೋಗ್ಯ ಅಧಿಕಾರಿ ಕೆ.ಕೆ.ಭವ್ಯಾ ಎಂಬವರ ಮೇಲೆ ನಡೆದ ಸಾಕುನಾಯಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲಿಕ ಬಿ.ಮಾಚಯ್ಯ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ…
ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ಧಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಣಗುಪ್ಪೆ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್.15ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶರಾಗಿದ್ದಾರೆ. ಹಿರಿಯ ಗಾಯಕಿ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ…
ಬೈರುತ್: ಅಮೇರಿಕಾ-ಇರಾನ್ ಮಾತುಕತೆ ವಿಫಲವಾದ ಕೆಲವೇ ಗಂಟೆಗಳ ನಂತರ ಹೆಬ್ಜುಲ್ಲಾ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದಾಳಿಯಲ್ಲಿ 11 ಮಂದಿ…
ಬೆಂಗಳೂರು : ಶಕ್ತಿ ಯೋಜನೆಯ ಮಹಿಳಾ ಟಿಕೆಟ್‌ಗಳನ್ನು ಪುರುಷ ಪ್ರಯಾಣಿಕರಿಗೂ ನೀಡಿ ಹಣ ಸಂಗ್ರಹಿಸಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ…