ಕೊಡಗು

ಸಾಕುನಾಯಿ ದಾಳಿ ಮಾಡಿದರೆ ಮಾಲೀಕರಿಗೆ 6 ತಿಂಗಳು ಜೈಲು: ಕೊಡಗು ಪೊಲೀಸರ ಎಚ್ಚರಿಕೆ

ಮಡಿಕೇರಿ : ಮನೆಯ ಸಾಕುನಾಯಿಗಳು ಯಾವುದೇ ವ್ಯಕ್ತಿಗಳ ಮೇಲೆ ದಾಳಿ ಮಾಡಿರುವ ಘಟನೆ ಕಂಡುಬಂದಲ್ಲಿ ಆ ನಾಯಿಯ ಮಾಲಕರ ಮೇಲೆ Section: 289 IPC ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಹಾಗೂ ಆರು ತಿಂಗಳ ಜೈಲುವಾಸ ಶಿಕ್ಷೆ ಮತ್ತು ದಂಡ ವಿಧಿಸಲಾಗುವುದು ಎಂದು ಕೊಡಗು ಪೊಲೀಸ್ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.

ಸಾಕುನಾಯಿ ದಾಳಿ ಮಾಡಿರುವ ಪ್ರಕರಣಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ 112ಗೆ ಕರೆ ಮಾಡುವಂತೆ ಹಾಗೂ ಕೆ.ಎಸ್.ಪಿ. ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಮಾಹಿತಿ ಒದಗಿಸುವವರ ವಿವರ ಬಹಿರಂಗಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಕರಣ ದಾಖಲು : ಈ ನಡುವೆ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕೊಣಂಜಗೇರಿ ಪಾರಾಣೆ ಗ್ರಾಮದಲ್ಲಿ ಬುಧವಾರ ಆರೋಗ್ಯ ಅಧಿಕಾರಿ ಕೆ.ಕೆ.ಭವ್ಯಾ ಎಂಬವರ ಮೇಲೆ ನಡೆದ ಸಾಕುನಾಯಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲಿಕ ಬಿ.ಮಾಚಯ್ಯ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.

andolanait

Recent Posts

ಓದುಗರ ಪತ್ರ: ನೀತಿ ಪಾಠಗಳು ಶಿಕ್ಷಣ ಭಾಗವಾಗಬೇಕೆಂಬ ಸಲಹೆ ಸ್ವಾಗತಾರ್ಹ

ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…

4 hours ago

ಓದುಗರ ಪತ್ರ: ವಿಚ್ಛೇದನಗಳೂ ದುಬಾರಿಯಾಗಿವೇ!

ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…

4 hours ago

ಓದುಗರ ಪತ್ರ: 3 ಕೋಟಿ ರೂ. ವೆಚ್ಚದ ಬಸ್ ನಿಲ್ದಾಣ ಜನರಿಗೋ, ಖಾಸಗಿ ವಾಹನಗಳಿಗೋ?

ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…

4 hours ago

ಬಹುತ್ವ ಭಾರತ ನೀತಿಗೆ ಮೋಹನ್ ಭಾಗವತ್ ಬದ್ಧರೇ?

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…

4 hours ago

ವಿಶ್ವದಾಖಲೆಗೆ ಕಾಯುತ್ತಿರುವ ಅರಿವೆಯ ಮೇಲಿನ ಮದರಂಗಿ ಚಿತ್ತಾರ

ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…

5 hours ago

ಅಧ್ಯಾತ್ಮದ ಅಮಲಿನಲ್ಲಿ ದಾರಿ ತಪ್ಪಿದ ತರುಣ ತರುಣಿಯರು

ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…

5 hours ago