ಕೊಡಗು

ವಿರಾಜಪೇಟೆಯಿಂದ 8 ಹೊಸ ಮಾರ್ಗ, ಬಸ್‌ಗಳ ಉದ್ಘಾಟನೆ

ವಿರಾಜಪೇಟೆ : ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ನೂತನವಾಗಿ ಆರಂಭಿಸಲಾದ 8 ಹೊಸ ಮಾರ್ಗಗಳಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಚಾಲನೆ ನೀಡಿದರು.

ವೇಗವಾಗಿ ಬೆಳೆಯುತ್ತಿರುವ ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಪ್ರಯಾಣಿಸುವ ಪ್ರಯಾಣಿಕರ ದಟ್ಟಣೆಯನ್ನು ತಗ್ಗಿಸಲು ಹಾಗೂ ಏರಿಕೆಯಾಗಿರುವ ಪ್ರಯಾಣಿಕರ ಸಂಖ್ಯೆಗನುಗುಣವಾಗಿ ನೂತನ ಬಸ್ ಮಾರ್ಗಗಳನ್ನು ಹಾಗೂ ಈ ಮಾರ್ಗಕ್ಕೆ ಹೆಚ್ಚುವರಿಯಾಗಿ ಎಂಟು ಹೊಸ ಬಸ್‌ಗಳು ಶಾಸಕರ ಪ್ರಯತ್ನದಿಂದಾಗಿ ದೊರಕಿದೆ.

ಈ ಸಂದರ್ಭ ಮಾತನಾಡಿದ ಶಾಸಕರು, ಆಧುನಿಕತೆ ಹಾಗೂ ನಗರೀಕರಣ ವೃದ್ಧಿಯಾದಂತೆಲ್ಲ ಜನಸಂದಣಿ ಜಾಸ್ತಿಯಾಗುವುದನ್ನು ಮನಗಂಡು ಪ್ರಯಾಣಿಕರ ಅನುಕೂಲಕ್ಕಾಗಿ ಈ ಹೊಸ ಮಾರ್ಗಗಳನ್ನು ಹಾಗೂ ಸುಸೂತ್ರವಾಗಿ ಪ್ರಯಾಣಿಸಲು ಹೊಸ ಬಸ್‌ಗಳನ್ನು ಈ ಭಾಗಕ್ಕೆ ಕಲ್ಪಿಸಲಾಗಿದೆ. ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಬಸ್‌ನ ಚಾಲಕರು ಹಾಗೂ ನಿರ್ವಾಹಕರು ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಸಂಸ್ಥೆಗೆ ಒಳ್ಳೆಯ ಹೆಸರು ತರುವಲ್ಲಿ ಶ್ರಮಿಸಬೇಕೆಂದು ಕಿವಿಮಾತು ಹೇಳಿದರು.

ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗಾಗಿ ಉಚಿತ ಬಸ್ ಸೌಲಭ್ಯವನ್ನು ಕಲ್ಪಿಸಿದ್ದು, ಇದರಿಂದ ನಾಡಿನ ಮಹಿಳೆಯರಿಗೆ ತುಂಬಾ ಅನುಕೂಲವಾಗಿದೆ ಎಂದು ಬಣ್ಣಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ತಾಲೂಕು ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ಜಾನ್ಸನ್, ವಿರಾಜಪೇಟೆ ಪುರಸಭೆಯ ಮುಖ್ಯ ಅಧಿಕಾರಿ ನಾಚಪ್ಪ, ವಿರಾಜಪೇಟೆ ಪುರಸಭೆಯ ಉಪಾಧ್ಯಕ್ಷರಾದ ಫಸಿಯಾ ತಬ್ಸುಂ ಇತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

2 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

2 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

2 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

2 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

2 hours ago

ಚಾಮರಾಜನಗರದಲ್ಲಿ ದಿಢೀರ್‌ ಆಲಿಕಲ್ಲು ಸಹಿತ ಮಳೆ ಅಬ್ಬರ

ಚಾಮರಾಜನಗರ : ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ರಾಜ್ಯದ…

2 hours ago