ಮಡಿಕೇರಿ: ನಗರದ ಖಾಸಗಿ ಲಾಡ್ಜ್‌ವೊಂದರಲ್ಲಿ ರೂಂ ಬುಕ್ ಮಾಡಿಕೊಂಡಿದ್ದ ಯುವಕನೊರ್ವ ವಿಷ ಸೇವಿಸಿ ಬಳಿಕ ಫ್ಯಾನ್‌ಗೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ.
ವಿರಾಜಪೇಟೆಯ ಆರ್ಜಿ ಗ್ರಾಮದ ನಿವಾಸಿ ಮೊಣ್ಣಪ್ಪ(೨೮) ಮೃತ ವ್ಯಕ್ತಿ. ಮೊಣ್ಣಪ್ಪ ಮಡಿಕೇರಿಯಲ್ಲಿ ಖಾಸಗಿ ಬಸ್ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದರು. ರೂಮಿನ ಬಾಗಿಲು ತೆರೆಯದೇ ಇದ್ದಾಗ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿ ಮತ್ತೊಂದು ಕೀ ಬಳಸಿ ತೆರೆದುನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರಿಗೆ ಈ ವಿಷಯವನ್ನು ಮುಟ್ಟಿಸಿದ್ದಾರೆ. ಸ್ಥಳಕ್ಕಾಗಮಿಸಿದ ಮಡಿಕೇರಿ ನಗರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈ ಸಂಬಂಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.