ನಾಪೋಕ್ಲು : ಮಡಿಕೇರಿಯ ಪ್ರಸಿದ್ಧ ಪ್ರವಾಸಿ ತಾಣ ಅಬ್ಬಿಫಾಲ್ಸ್ ನಲ್ಲಿ ಮಂಗಳವಾರ ಭಾರೀ ಅವಗಡವೊಂದು ತಪ್ಪಿದಂತಾಗಿದೆ. ಮುಖ್ಯರಸ್ತೆಯಿಂದ ಜಲಧಾರೆಗೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯೆ ಬೃಹತ್ ಗಾತ್ರದ ಒಣಮರವೊಂದು ಮುರಿದು ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಪ್ರವಾಸಿಗರು ಪಾರಾಗಿದ್ದಾರೆ.
ಮಂಗಳವಾರ ಬೆಳಗ್ಗಿನಿಂದಲೇ ಜಲಧಾರೆ ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದರು. ಈ ವೇಳೆ ಕಾಫಿ ತೋಟದಲ್ಲಿದ್ದ ಒಣ ಮರವೊಂದು ಏಕಾಏಕಿ ಮುರಿದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಮರ ಬಿದ್ದ ಸ್ಥಳದಿಂದ ಕೆಲವರು ಆಗಷ್ಟೇ ಮುಂದೆ ಸಾಗಿದ್ದರೆ, ಇನ್ನೂ ಕೆಲವರು ತರಾತುರಿಯಿಂದ ಜಲಧಾರೆಯನ್ನು ಕಣ್ತುಂಬಿಕೊಳ್ಳಲು ಬರುತ್ತಿದ್ದರು. ಅದೃಷ್ಟವಶಾತ್, ಮರ ಮಾರ್ಗಕ್ಕೆ ಅಡ್ಡಲಾಗಿ ಬೇಲಿಯ ಮೇಲೆ ಬಿದ್ದಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…