ಕೊಡಗು

ಕಾವೇರಿ ನದಿ ದಡದಲ್ಲಿ ತ್ಯಾಜ್ಯದ ರಾಶಿ..!

ತವರಿನಲ್ಲೇ ಕಣ್ಣೀರಿಡುತ್ತಿರುವ ಜೀವನದಿ; ಸ್ವಚ್ಛತೆಗೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟದ ಎಚ್ಚರಿಕೆ

ಕೃಷ್ಣ ಸಿದ್ದಾಪುರ

ಸಿದ್ದಾಪುರ: ಕೋಟ್ಯಾಂತರ ಜನರ ಜೀವನಾಡಿಯಾಗಿರುವ ಕಾವೇರಿ ನದಿ ತವರಿನಲ್ಲೇ ಕಲುಷಿತಗೊಳ್ಳುತ್ತಿರುವ ಬಗ್ಗೆ ಸ್ಥಳೀಯರು ಗಂಭೀರ ಆತಂಕ ವ್ಯಕ್ತಪಡಿಸಿದ್ದಾರೆ. ಸಿದ್ದಾಪುರ- ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ತ್ಯಾಜ್ಯ ವಿಲೇವಾರಿಗೆ ಸೂಕ್ತ ವ್ಯವಸ್ಥೆಯ ಕೊರತೆಯಿಂದಾಗಿ ನದಿ ದಡ ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ರಾಶಿಗಳು ಹೆಚ್ಚಾಗುತ್ತಿದ್ದು, ಇದರಿಂದ ನದಿ ನೀರಿನ ಗುಣಮಟ್ಟ ಹದಗೆಡುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಗ್ರಾಮಗಳ ಚರಂಡಿಗಳ ಮೂಲಕ ಕಲುಷಿತ ನೀರು ನೇರವಾಗಿ ನದಿಗೆ ಸೇರುತ್ತಿದ್ದು, ರಾತ್ರಿ ವೇಳೆಗಳಲ್ಲಿ ಕಾಫಿ ಪಲ್ಪಿಂಗ್ ಘಟಕಗಳಿಂದ ಹೊರಬರುವ ಮಲೀನ ನೀರನ್ನೂ ನಿಯಂತ್ರಣವಿಲ್ಲದೆ ನದಿಗೆ ಹರಿಸಲಾಗುತ್ತಿದೆ. ಇದರ ಪರಿಣಾಮವಾಗಿ ಜಲಚರಗಳ ಜೀವಚಕ್ರ ಹಾನಿಗೊಳಗಾಗುತ್ತಿದೆ ಎಂದು ಪರಿಸರ ಹೋರಾಟಗಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಡೆಸಿದ ಪರಿಶೀಲನೆಗಳಲ್ಲಿ ಕೆಲವು ಪ್ರದೇಶಗಳಲ್ಲಿ ನದಿ ನೀರು ಜಾನುವಾರುಗಳಿಗೆ ಸಹ ಕುಡಿಯಲು ಯೋಗ್ಯವಲ್ಲ ಎಂಬ ವರದಿ ನೀಡಿದ್ದರೂ, ಮುಂಜಾಗ್ರತಾ ಕ್ರಮ ವಹಿಸುತ್ತಿಲ್ಲ. ನದಿ ದಡದಲ್ಲಿ ತ್ಯಾಜ್ಯ ರಾಶಿಗಳು ಹೆಚ್ಚುತ್ತಿರುವುದು ಸಾರ್ವಜನಿಕ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ.

ಗ್ರಾಮದ ಸಾರ್ವಜನಿಕರು ಮತ್ತು ಶಾಲಾ ವಿದ್ಯಾರ್ಥಿಗಳು ತ್ಯಾಜ್ಯದ ದುರ್ವಾಸನೆ ನಡುವೆ ಮೂಗು ಮುಚ್ಚಿಕೊಂಡೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೊರ ಜಿಲ್ಲೆ ಹಾಗೂ ರಾಜ್ಯಗಳಿಂದ ಬರುವ ಪ್ರವಾಸಿಗರಿಗೂ ಪರಿಸರ ಮಾನದಂಡಗಳ ಬಗ್ಗೆ ಕೆಟ್ಟ ಸಂದೇಶ ರವಾನೆಯಾಗುತ್ತಿದೆ ಎಂದು ಸ್ಥಳೀಯರು ವಿಷಾದ ವ್ಯಕ್ತಪಡಿಸಿದ್ದಾರೆ.

ಹಿಂದೆ ಡಾಮಿನೋಸ್ ಯುವಕ ಸಂಘದ ಕಾರ್ಯಕರ್ತರು ನದಿ ದಡವನ್ನು ಸ್ವಚ್ಛಗೊಳಿಸಿ ಹೂವಿನ ಗಿಡಗಳನ್ನು ನೆಟ್ಟು ಪರಿಸರ ಸುಂದರೀಕರಣಕ್ಕೆ ಮುಂದಾಗಿದ್ದರು. ಆದರೆ ನಿರಂತರ ಪಾಲನೆಗೆ ಪಂಚಾಯಿತಿಯಿಂದ ಅಗತ್ಯ ಸಹಕಾರ ಲಭ್ಯವಾಗದ ಕಾರಣ ಆ ಪ್ರಯತ್ನಗಳು ಸ್ಥಿರವಾಗಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಹಲವು ವರ್ಷಗಳಿಂದ ಸ್ವಯಂಪ್ರೇರಿತವಾಗಿ ನಡೆಯುತ್ತಿದ್ದ ಸ್ವಚ್ಛತಾ ಅಭಿಯಾನಗಳು ಆಡಳಿತಾತ್ಮಕ ಬೆಂಬಲದ ಕೊರತೆಯಿಂದ ದುರ್ಬಲಗೊಂಡಿವೆ ಎನ್ನಲಾಗಿದೆ.

ಸಿದ್ದಾಪುರ ಹಾಗೂ ನೆಲ್ಯಹುದಿಕೇರಿ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿಗೆ ಸಮರ್ಪಕ ಸ್ಥಳ ಗುರುತಿಸದಿರುವುದು ಸಮಸ್ಯೆಯ ಮೂಲ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ತ್ಯಾಜ್ಯವನ್ನು ವ್ಯವಸ್ಥಿತವಾಗಿ ಸಂಗ್ರಹಿಸಿ ವಿಲೇವಾರಿ ಮಾಡುವ ವ್ಯವಸ್ಥೆ ರೂಪಿಸದಿದ್ದರೆ ನದಿ ಪರಿಸರದ ಮೇಲೆ ಪರಿಣಾಮ ಹೆಚ್ಚಾಗಲಿದೆ.

ನದಿ ದಡದಲ್ಲಿ ತ್ಯಾಜ್ಯ ಸುರಿಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಚರಂಡಿ ನೀರು ನದಿಗೆ ಸೇರುವುದನ್ನು ತಡೆಗಟ್ಟಬೇಕು, ಕಾಫಿ ಪಲ್ಪಿಂಗ್ ಮಲೀನ ನೀರಿನ ನಿಯಂತ್ರಣಕ್ಕೆ ವಿಶೇಷ ಮೇಲ್ವಿಚಾರಣೆ ಅಗತ್ಯ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ನದಿ ಸಂರಕ್ಷಣೆ ಮತ್ತು ಸ್ವಚ್ಛತೆ ಕುರಿತು ಸರ್ಕಾರ ಹಾಗೂ ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಜನಆಂದೋಲನಕ್ಕೆ ಮುಂದಾಗಬೇಕಾಗುತ್ತದೆ ಎಂದು ಸ್ಥಳೀಯ ಸಂಘಟನೆಗಳು ಎಚ್ಚರಿಕೆ ನೀಡಿದೆ.

” ಕಾವೇರಿ ನದಿಯ ನೀರು ಕಲುಷಿತಗೊಳಿಸುತ್ತಿರುವುದನ್ನು ತಡೆಗಟ್ಟಲು ಸ್ಥಳೀಯ ಆಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು. ನದಿ ತಟದಲ್ಲಿ ತ್ಯಾಜ್ಯ ಹಾಕುವ ಅಥವಾ ಕಲುಷಿತ ನೀರನ್ನು ಹರಿಸುವ ಜನರನ್ನು ಪತ್ತೆ ಹಚ್ಚಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸ್ಥಳೀಯ ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು.”

-ಎಂ.ಎನ್. ಚಂದ್ರಮೋಹನ್, ಸಂಚಾಲಕರು: ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ

“ಪುಣ್ಯನದಿ ಕಾವೇರಿ ತವರಿನಲ್ಲೇ ಕಣ್ಣೀರಿಡುತ್ತಿದ್ದಾಳೆ. ಸಿದ್ದಾಪುರದಿಂದ ಮಡಿಕೇರಿಗೆ ಸಂಪರ್ಕಿಸುವ ಕಾವೇರಿ ಸೇತುವೆ ಬಳಿ ಕಸವನ್ನು ತಂದು ಸುರಿಯುತ್ತಿರುವುದರಿಂದ ಇಡೀ ವಾತಾವರಣ ಗಬ್ಬು ವಾಸನೆ ಬೀರುತ್ತಿದೆ. ಅಲ್ಲದೆ ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತ್ಯಾಜ್ಯ ನೀರನ್ನು ಚರಂಡಿ ಮೂಲಕ ನದಿಗೆ ಬಿಡಲಾಗುತ್ತಿದ್ದು, ಜಲಮೂಲವನ್ನು ಸಂರಕ್ಷಿಸಬೇಕಾದ ಆಡಳಿತ ವರ್ಗದ ಅಸಡ್ಡೆ ತೋರುತ್ತಿದೆ.”

-ಪ್ರಕಾಶ್ ಸಿ.ಕೆ.: ಸ್ಥಳಿಯ ನಿವಾಸಿ.

” ನದಿ ದಡವನ್ನು ಶುಚಿಗೊಳಿಸಿ ಹೂ ಗಿಡಗಳನ್ನು ನೆಟ್ಟು ಪೋಷಿಸುತ್ತಿದ್ದ ಸಂದರ್ಭ ಗ್ರಾಮ ಪಂಚಾಯಿತಿ ಸೂಕ್ತ ಸಹಕಾರ ನೀಡದೆ ಪಾಲನೆಯು ಮಾಡದೆ ನಿರ್ಲಕ್ಷದ ಪರಿಣಾಮ ಕಾವೇರಿ ನದಿ ದಡ ಪರಿಸರ ಕಲುಷಿತ ವಾತಾವರಣ ಕಂಡುಬರುತ್ತಿದೆ. ಈ ಸಂಬಂಧ ಸಂಬಂಧಪಟ್ಟವರಿಗೆ ಮನವಿ ನೀಡಲಾಗಿದೆ. ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ.”

-ಶೌಕತ್ ಆಲಿ, ಡಾಮಿನೊಸ್ ಯುವಕ ಸಂಘ: ಸಿದ್ದಾಪುರ

” ಸಿದ್ದಾಪುರ ಹಾಗೂ ನೆಲ್ಯಹುದಿಕೇರಿ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿಗೆ ಸಮರ್ಪಕ ಸ್ಥಳ ಗುರುತಿಸದಿರುವುದು ಸಮಸ್ಯೆಗೆ ಮೂಲ ಕಾರಣ. ಕಾವೇರಿ ನದಿ ದಡದಲ್ಲಿ ತ್ಯಾಜ್ಯದ ರಾಶಿಯನ್ನು ಸಂಬಂಧಪಟ್ಟ ಅಧಿಕಾರಿಗಳು ತೆರವುಗೊಳಿಸಬೇಕು.”

ಎಂ.ಎ.ಅಜೀಜ್: ಸಾಮಾಜಿಕ ಹೋರಾಟಗಾರ

ಆಂದೋಲನ ಡೆಸ್ಕ್

Recent Posts

ಮಾರ್ಚ್.‌10ರಂದು ಡಿಕೆಶಿ ಡಿನ್ನರ್‌ ಪಾರ್ಟಿ: ಸಿದ್ದರಾಮಯ್ಯಗೂ ಆಹ್ವಾನ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಾರ್ಚ್.10ರಂದು ಡಿನ್ನರ್‌ ಪಾರ್ಟಿ ಆಯೋಜನೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.‌6ರಂದು ಡಿ.ಕೆ.ಶಿವಕುಮಾರ್‌ ಕೆಪಿಸಿಸಿ…

37 mins ago

ಫೋನ್‌ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್‌ ತಿರುಗೇಟು

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತು…

40 mins ago

ಖಮೇನಿ ಹತ್ಯೆ ವಿರೋಧಿಸಿ ಪ್ರತಿಭಟನೆ: ಕಾಶ್ಮೀರದಲ್ಲಿ ಕಠಿಣ ನಿರ್ಬಂಧ

ಶ್ರೀನಗರ: ಇರಾನ್‍ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಣಿವೆಯಾದ್ಯಂತ ನಡೆದ ಬೃಹತ್ ಪ್ರತಿಭಟನೆಗಳ ನಂತರ ಕಾಶ್ಮೀರದಲ್ಲಿ…

44 mins ago

ಖಮೇನಿ ಹತ್ಯೆ ಬಳಿಕ ಕೇಂದ್ರ ಸರ್ಕಾರ ಮೌನವಹಿಸಿದೆ: ಸೋನಿಯಾ ಗಾಂಧಿ ಆಕ್ರೋಶ

ನವದೆಹಲಿ: ಇರಾನ್‍ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಳಿಕ ಕೇಂದ್ರ ಸರ್ಕಾರ ಮೌನವಾಗಿರುವುದಕ್ಕೆ ಕಾಂಗ್ರೆಸ್ ಸಂಸದೀಯ…

47 mins ago

ಖಮನೈ ಹತ್ಯೆ ಖಂಡಿಸಿ ಪ್ರತಿಭಟನೆ ವಿಚಾರ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್ ಅಧ್ಯಕ್ಷ ಆಯಾತೊಲ್ಲಾ ಆಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ನಿಗಾ ವಹಿಸುವ ಪರಿಸ್ಥಿತಿ…

50 mins ago

ಅಜ್ಜೀಪುರದಿಂದ ಬೆಂಗಳೂರಿಗೆ ಪಾದಯಾತ್ರೆ: ಸಿದ್ದರಾಮಯ್ಯಗೆ ಮನವಿ ಸಲ್ಲಿಸಿ ಪ್ರತಿಭಟನೆ ಕೈಬಿಟ್ಟ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಉಡುತೊರೆ ಹಳ್ಳ ಜಲಾಶಯಕ್ಕೆ ಕಾವೇರಿ ನದಿಯಿಂದ ಏತ ನೀರಾವರಿ…

1 hour ago