ಮಡಿಕೇರಿ: ಕೊಡಗಿನ ಕುಲದೈವ ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ರಾತ್ರಿ ವೇಳೆ ಒಂಟಿ ಸಲಗವೊಂದು ಕಾಣಿಸಿಕೊಂಡ ಪರಿಣಾಮ ಜನತೆ ಭಯಭೀತರಾಗಿದ್ದಾರೆ.
ಆಹಾರ ಅರಸಿ ನಾಡಿಗೆ ಬಂದಿದ್ದ ಒಂಟಿ ಸಲಗವೊಂದು ದೇವಸ್ಥಾನದ ಮುಖ್ಯದ್ವಾರದ ಬಳಿಯಿರುವ ದೇವರಕಟ್ಟೆಯಲ್ಲಿನ ಹಲಸಿನ ಮರದಿಂದ ಹಲಸಿನಕಾಯಿಯನ್ನು ಬೀಳಿಸಲು ಯತ್ನಿಸಿದೆ. ಈ ದೃಶ್ಯ ದೇವಾಲಯದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾರ್ವಜನಿಕರು ಭಯಭೀತರಾಗಿದ್ದಾರೆ.
ಇನ್ನು ಈ ಭಾಗದಲ್ಲಿ ದಿನನಿತ್ಯ ಕಾಡಾನೆಗಳ ಹಾವಳಿ ಜಾಸ್ತಿಯಾಗಿದ್ದು, ಇವುಗಳನ್ನು ತಡೆಗಟ್ಟಲು ಅರಣ್ಯ ಇಲಾಖೆ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಸ್ಥಳೀಯರು ಗಂಭೀರ ಆರೋಪ ಮಾಡಿದ್ದಾರೆ.
ಹೆಚ್ಚಿನ ಅನಾಹುತ ಆಗುವ ಮುನ್ನ ಇನ್ನಾದರೂ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.





