ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ ಗ್ರಾಮದಲ್ಲಿ ನಡೆದಿದೆ.
ಎಚ್.ಟಿ.ಸುನಿಲ್ ಎಂಬುವವರಿಗೆ ಸೇರಿದ ಆಟೋ ಮೇಲೆ ಕಾಡಾನೆ ದಾಳಿ ಮಾಡಿದೆ. ದಂತದಿಂದ ಗುದ್ದಿದ ಪರಿಣಾಮ ಆಟೋ ಸಂಪೂರ್ಣ ಜಖಂಗೊಂಡಿದೆ. ಈ ವೇಳೆ ಸಲಗವನ್ನು ಕಂಡ ಗ್ರಾಮಸ್ಥರು ದಿಕ್ಕಾಪಾಲಾಗಿ ಓಡಿ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ.
ಒಂಟಿಸಲಗ ಗ್ರಾಮದಲ್ಲಿ ಸಂಚರಿಸಿದ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅರಣ್ಯ ಸಿಬ್ಬಂದಿ ಡ್ರೋನ್ ಕ್ಯಾಮರಾ ಬಳಸಿ ಆನೆಯನ್ನು ಪತ್ತೆಹಚ್ಚಿ ಕಾಡಿಗೆ ಅಟ್ಟಿದ್ದಾರೆ.
ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…
ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…
ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…