ಮಡಿಕೇರಿ: ಜಿಲ್ಲೆಯ ಬಡ ವಿದ್ಯಾರ್ಥಿಗಳ ಮಹತ್ವಾಕಾಂಕ್ಷೆಯ ಕೊಡಗು ವಿಶ್ವ ವಿದ್ಯಾಲಯ ಮುಚ್ಚುವ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿಯಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡಗು ವಿವಿ ಸೇರಿದಂತೆ ರಾಜ್ಯದ ೯ ವಿವಿಗಳನ್ನು ಮುಚ್ಚುವ ನಿರ್ಧಾರ ಖಂಡನೀಯ. ಹೆಚ್ಚಿನ ಶಿಕ್ಷಣಕ್ಕೆ ಬೇರೆ ಜಿಲ್ಲೆಗಳಿಗೆ ಹೋಗದೆ ಜಿಲ್ಲೆಯಲ್ಲೆ ವಿದ್ಯಾಭ್ಯಾಸ ಮಾಡುವ ಕೊಡಗು ಜಿಲ್ಲೆಯ ವಿದ್ಯಾರ್ಥಿಗಳ ಕನಸು ನುಚ್ಚುನೂರಾಗಿದೆ. ಅನೇಕ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಬೀದಿಗೆ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದ್ದಾರೆ.
ರಾಜ್ಯ ಸರ್ಕಾರ ದುಂದುವೆಚ್ಚಕ್ಕೆ ಕಡಿವಾಣ ಹಾಕಿದ್ದರೆ ವಿವಿಗಳನ್ನು ಮುಚ್ಚುವ ಮತ್ತು ಜನಸಾಮಾನ್ಯರ ಮೇಲೆ ತೆರಿಗೆ ಹೊರೆ ಹಾಕುವ ದುಸ್ಥಿತಿ ಒದಗಿ ಬರುತ್ತಿರಲಿಲ್ಲ. ಈಗಲಾದರು ಸರ್ಕಾರ ಎಚ್ಚೆತ್ತುಕೊಂಡು ಜನಸಾಮಾನ್ಯರಿಗೆ ಹೊರೆಯಾಗದಂತೆ ಶಿಕ್ಷಣ, ಆರೋಗ್ಯ ಮತ್ತು ಕೃಷಿಯಂತಹ ವಲಯಗಳ ಕಡೆ ಒಲವು ತೋರಿ ಈ ಬಾರಿಯ ಬಜೆಟ್ ಮಂಡಿಸಬೇಕು ಹಾಗೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರ ಆರ್ಥಿಕ ದಿವಾಳಿತನಕ್ಕೆ ತುತ್ತಾಗಿದ್ದು, ಒಂದು ರೂಪಾಯಿಯ ಗ್ಯಾರಂಟಿ ನೀಡಿ ನಾಲ್ಕು ರೂಪಾಯಿ ವಸೂಲಿ ಮಾಡುತ್ತಿದೆ.
ಆಸ್ತಿ ನೋಂದಣಿ ಶುಲ್ಕ, ಆಸ್ತಿ ಮಾರ್ಗದರ್ಶನ ಮೌಲ್ಯಗಳು, ವಾಹನ ನೋಂದಣಿ ಶುಲ್ಕ, ಆಸ್ಪತ್ರೆ ಸೇವಾ ಶುಲ್ಕಗಳು, ಸರ್ಕಾರಿ ಕಾಲೇಜು ಶುಲ್ಕಗಳು, ಬೆಂಗಳೂರು ಮೆಟ್ರೋ ದರ, ಎಲೆಕ್ಟ್ರಿಕ್ ವಾಹನ ತೆರಿಗೆ, ವಿದ್ಯುತ್ ದರ, ನೀರಿನ ಸುಂಕ, ಆಸ್ತಿ ತೆರಿಗೆ, ಬಿತ್ತನೆ ಬೀಜಗಳ ದರ, ಬಿಯರ್ ದರ, ಹಾಲಿನ ದರ, ಬಸ್ ಪ್ರಯಾಣ ದರ ಮತ್ತು ಮದ್ಯದ ಮೇಲಿನ ತೆರಿಗೆಯನ್ನು ಸರ್ಕಾರ ದುಬಾರಿಗೊಳಿಸಿದೆ.
ಆರ್ಥಿಕವಾಗಿ ಕುಗ್ಗಿ ಹೋಗಿರುವ ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಮತ್ತು ತೆರಿಗೆಯನ್ನು ನಿರತಂತರವಾಗಿ ಏರಿಸುತ್ತಲೇ ಬರುತ್ತಿದ್ದು, ಜನರ ಹಿತದೃಷ್ಟಿಯಿಂದ ತಕ್ಷಣ ಇದಕ್ಕೆ ಕಡಿವಾಣ ಹಾಕಬೇಕು ಎಂದು ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ.
ಬೆಂಗಳೂರು : ನಟ ಕಿಚ್ಚ ಸುದೀಪ್ ಮಗಳು, ಗಾಯಕಿ ಸಾನ್ವಿ ಸುದೀಪ್ ಬಗ್ಗೆ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ…
ಬೆಂಗಳೂರು: ಮಹಾರಾಷ್ಟ್ರದ ಎಎನ್‌ಟಿಎಫ್ ಅಧಿಕಾರಿಗಳು ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ 55 ಕೋಟಿ ಮೌಲ್ಯದ…
ಹುಣಸೂರು : ಹುಣಸೂರು ನಗರದಲ್ಲಿ ಹಾಡಹಗಲೇ ದೊಡ್ಡ ದರೋಡೆ ನಡೆದಿದ್ದು, ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ…
ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ತಮ್ಮ 129ನೇ ಮನ್ ಕಿ ಬಾತ್ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. 2025ರಲ್ಲಿ ಭಾರತದ…
ಕಾರವಾರ: ದೇಶದ ಪ್ರಥಮ ಪ್ರಜೆಯಾಗಿರುವ ಸೇನಾ ಪಡೆಗಳ ಮಹಾದಂಡ ನಾಯಕಿ ರಾಷ್ಟ್ರಪತಿ ದ್ರೌಪದ ಮುರ್ಮು ಅವರು ಇಂದು ಜಲಾಂತರಗಾಮಿ ನೌಕೆಯಲ್ಲಿ…
ಮೈಸೂರು: ಅಯ್ಯಪ್ಪ ಸ್ವಾಮಿ ದೇವಸ್ಥಾನ ಪಕ್ಕದ ಕೇರಳ ರಾಜ್ಯದಲ್ಲಿ ಇದ್ದರೂ ಅಯ್ಯಪ್ಪನಿಗೆ ಹೆಚ್ಚಿನ ಭಕ್ತರು ಇರುವುದು ನಮ್ಮ ಕರ್ನಾಟಕದಲ್ಲಿಯೇ ಪ್ರತಿ…