ಕುಶಾಲನಗರ: ನವಜಾತ ಶಿಶು ಬೀದಿ ನಾಯಿಗಳ ಪಾಲಾದ ಘಟನೆ ಇಲ್ಲಿನ ನಂಜರಾಯಪಟ್ಟಣದಲ್ಲಿ ನಡೆದಿದೆ.
ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟೆ ಹಾಡಿ ಸಮುದಾಯಭವನ ಬಳಿಯ ತೋಟವೊಂದರಲ್ಲಿ ನವಜಾತ ಶಿಶು ಪತ್ತೆಯಾಗಿದೆ. ಜನಿಸಿದ ಕೆಲವು ಗಂಟೆಗಳ ಅವಧಿಯ ಹೆಣ್ಣು ಶಿಶುವನ್ನು ತೋಟದಲ್ಲಿ ಬಿಸಾಡಿ ಹೋದ ಪರಿಣಾಮ ಶಿಶು ನಾಯಿಗಳ ಪಾಲಾಗಿದೆ ಎನ್ನಲಾಗಿದೆ. ಇದನ್ನು ಗಮನಿಸಿದ ಸ್ಥಳೀಯರು ನಾಯಿಗಳನ್ನು ಓಡಿಸಿದ್ದಾರೆ.
ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ಆರ್.ಕೆ.ಚಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.