ಕೊಡಗು

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ.

ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಅರಣ್ಯ ಪ್ರದೇಶದ ಬಳಿ ಈ ಘಟನೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 275ರ ಆನೆಕಾಡು ಸಮೀಪದಲ್ಲಿ ಈ ಅಪಘಾತ ಸಂಭವಿಸಿದೆ. ತಡರಾತ್ರಿ ತಮ್ಮ ಕಾರಿನಲ್ಲಿ ಮನೆಗೆ ತೆರಳುತ್ತಿದ್ದಾಗ ರಸ್ತೆಬದಿ ನಿಂತಿದ್ದ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಮೃತ ಹರೀಶ್‌ ಅವರು ಬಹುಮುಖಿ ಪ್ರತಿಭೆಯಾಗಿದ್ದರು. ವೃತ್ತಿಜೀವನದ ಜೊತೆಗೆ ಹಲವು ಕನ್ನಡ ಸಿನಿಮಾಗಳಲ್ಲಿ ಸಹ ಕಲಾವಿದನಾಗಿ ಮತ್ತು ಕಿರುತೆರೆಯ ಜನಪ್ರಿಯ ಧಾರಾವಾಹಿಗಳಲ್ಲಿ ನಟಿಸುವ ಮೂಲಕ ತಮ್ಮನ್ನು ಗುರುತಿಸಿಕೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್‌ ಹೇಳಿಕೆ ದಾಖಲು ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…

4 hours ago

ಆಹಾರ ಸುರಕ್ಷತೆ ಬಗ್ಗೆ ಕಳವಳ: ತಪಾಸಣೆಗೆ ಸಚಿವ ಯು.ಟಿ.ಖಾದರ್‌ ಸೂಚನೆ

ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…

5 hours ago

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

11 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

11 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

12 hours ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

12 hours ago