ಕುಶಾಲನಗರ: ಕುಶಾಲನಗರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಶೈಲಜಾ ಬಡಾವಣೆಯಲ್ಲಿರುವ ಸ್ಮಶಾನದ ಜಾಗದಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಗಿಡಗಳನ್ನು ಬೆಳೆಸಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಹೇರೂರು ಗ್ರಾಮದ ನಿವಾಸಿ ಪ್ರಶಾಂತ್ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಬಂಧಿತನಿಂದ 1 ಕೆ.ಜಿ 730 ಗ್ರಾಂ ತೂಕದ 19 ಹಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಯನ್ನು ಬಂಧಿಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಶ್ಲಾಘಿಸಿದ್ದಾರೆ.





