ಕೊಡಗು

ಮತ್ತಿಗೋಡು ಸಾಕಾನೆ ಶಿಬಿರಕ್ಕೆ ಅಜಯ್ ಮಾರ್ಕನ್ ಭೇಟಿ

ಮಡಿಕೇರಿ: ಕೊಡಗು ಜಿಲ್ಲೆಯ ಮತ್ತಿಗೋಡು ಸಾಕಾನೆ ಶಿಬಿರಕ್ಕೆ ಸಂಸದ ಅಜಯ್ ಮಾರ್ಕನ್ ಹಾಗೂ ಶಾಸಕರು ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಭೇಟಿ ನೀಡಿದರು.

ಶಾಸಕರ ಆಹ್ವಾನದ ಮೇರೆಗೆ, ಕೊಡಗು ಪ್ರವಾಸದಲ್ಲಿರುವ ಅಜಯ್ ಮಾಕನ್ ಸಾಕಾನೆ ಶಿಬಿರಕ್ಕೆ ಶಾಸಕರೊಂದಿಗೆ ವೀಕ್ಷಣೆಗೆ ತೆರಳಿದರು. ಸಾಕನೆ ಶಿಬಿರದಲ್ಲಿ ಇರುವ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದ ಶಾಸಕರು, ಸಂಸದರು, ಶಿಬಿರದ ಅಽಕಾರಿಗಳು ಹಾಗೂ ಪರಿಚಾರಕರೊಂದಿಗೆ ಮಾತನಾಡಿದರು. ಸಾಕಾನೆ ಶಿಬಿರದಲ್ಲಿ ಸದ್ಯಕ್ಕೆ ಇರುವ ಆನೆಗಳ ಸಂಖ್ಯೆಯ ಬಗ್ಗೆ ವಿವರ ಪಡೆದು ಸಲಹೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ತಿತಿಮತಿ ವಲಯ ಅಧ್ಯಕ್ಷ ನವೀನ್, ಕಾಂಗ್ರೆಸ್ ಪ್ರಮುಖರಾದ ಬೆನ್ನಿ, ಪಂಕಜ, ಹರೀಶ್ ಪೂವಯ್ಯ ಇತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

15 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

15 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

16 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

16 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

16 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

16 hours ago