ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕಿಡಿಕಾರಿದ್ದಾರೆ.
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರಿದ್ದ ವಿಮಾನ ಪತನವಾದ ಬಗ್ಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅನುಮಾನ ವ್ಯಕ್ತಪಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಡಿಕೇರಿಯಲ್ಲಿ ಮಾತನಾಡಿದ ಸಂಸದ ಯದುವೀರ್ ಒಡೆಯರ್ ಅವರು, ಎಲ್ಲಾ ದುರಂತಗಳು ಆದಾಗ ಸಂಪೂರ್ಣ ತನಿಖೆ ಆಗಿವೆ. ಬ್ಲಾಕ್ ಬಾಕ್ಸ್ ಸೇರಿದಂತೆ ವಿವಿಧ ಆಧಾರಗಳನ್ನು ತನಿಖೆ ಮಾಡಲಾಗುತ್ತದೆ. ಇವರು ಯಾಕೆ ಇಂತಹ ಹೇಳಿಕೆ ಕೊಟ್ಟಿದ್ದಾರೆ ಗೊತ್ತಿಲ್ಲ. ಪಶ್ಚಿಮ ಬಂಗಾಳದಲ್ಲಿ ಸದ್ಯದಲ್ಲೇ ಚುನಾವಣೆ ಇದೆ. ಈ ಕಾರಣದಿಂದ ಮಮತಾ ಬ್ಯಾನರ್ಜಿ ಹಾಗೆ ಹೇಳಿರಬಹುದು. ಇವರು ಯಾಕೆ ಹೀಗೆ ಹೇಳುತ್ತಿದ್ದಾರೆ ಗೊತ್ತಿಲ್ಲ. ಪುಲ್ವಾಮಾ ದಾಳಿ ಮತ್ತು ಸೇನಾಧಿಕಾರಿ ಬಿಪಿನ್ ರಾವತ್ ಸಾವಿನ ತನಿಖೆಗಳನ್ನೆಲ್ಲಾ ಮಾಡಲಾಗಿದೆ. ಆದರೆ ಅವು ಸೇನೆಯ ವಿಷಯಗಳಾಗಿದ್ದರಿಂದ ಯಾವುವನ್ನು ಬಹಿರಂಗಗೊಳಿಸಿಲ್ಲ. ಬಿಪಿನ್ ರಾವತ್ ಅವರ ಘಟನೆಯಲ್ಲಿ ಮಂಜು ಇತ್ತು. ಅದೆಲ್ಲವೂ ಬಹಿರಂಗವಾಗಿದೆ ಎಂದು ಹೇಳಿದರು.





