ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ 11 ವರ್ಷದ ಬಾಲಕಿ ಡಿ.11ರಂದು ನ್ಯಾಯಬೆಲೆ ಅಂಗಡಿಗೆ ಮೊಟ್ಟೆ ಖರೀದಿಸಲು ತೆರಳಿದ ಸಂದರ್ಭದಲ್ಲಿ ಅಂಗಡಿ ನಡೆಸುತ್ತಿರುವ, ಮಾಲ್ದಾರೆ ಗ್ರಾ.ಪಂ. ಮಾಜಿ ಅಧ್ಯಕ್ಷ, ರಜಾಕ್ (58) ಎಂಬಾತ ಬಾಲಕಿಯನ್ನು ಪೀಡಿಸಿ ಅಂಗಡಿಗೆ ಎಳೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.
ಬಾಲಕಿ ತಪ್ಪಿಸಿಕೊಂಡು ಬಂದು ಪೋಷಕರಿಗೆ ವಿಷಯ ತಿಳಿಸಿದ್ದಾಳೆ ಎನ್ನಲಾಗಿದ್ದು, ಬಳಿಕ ಬಾಲಕಿಯ ಪೋಷಕರು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ನೀಡಿದ್ದಾರೆ. ಪೋಕ್ಸೋ ಸೇರಿದಂತೆ ವಿವಿಧ ಬಿಎನ್‌ಎಸ್ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ. ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಇದನ್ನೂ ಓದಿ:-ರೈತರಿಗೆ ಸಿಹಿ ಸುದ್ದಿ ; ಕೊಬ್ಬರಿಗೆ ಬೆಂಬಲ ಬೆಲೆ
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…