Mysore
20
overcast clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ಉಂಗುರ‌ ನುಂಗಿದ್ದ 8 ತಿಂಗಳ ಮಗು ಸಾವು

ಸಿದ್ದಾಪುರ (ಕೊಡಗು): ಉಂಗುರ ನುಂಗಿದ್ದ 8 ತಿಂಗಳಿನ ಮಗು ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟಿದೆ.

ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದ ನಿವಾಸಿ ಮುನೀರ್ ಅವರ 8 ತಿಂಗಳ ಗಂಡು ಮಗು ಬುಧವಾರ ರಾತ್ರಿ ಆಕಸ್ಮಿಕವಾಗಿ ಉಂಗುರವನ್ನು ನುಂಗಿತ್ತು. ಈ ವೇಳೆ ಉಂಗುರ ಹೊರತೆಗೆಯಲು ಸಾಧ್ಯವಾಗದೇ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು.ಬಳಿಕ ಮಡಿಕೇರಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿತ್ತು. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಉಂಗುರವನ್ನು ಹೊರತೆಗೆದರು. ಆದರೆ ತೀವ್ರ ಉಸಿರಾಟದ ತೊಂದರೆಯಿಂದ ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ