ಕೊಡಗು: ಕೊಡಗಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಕಾಡಾನೆ ದಾಳಿಗೆ ಮತ್ತೋರ್ವ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ.
ದೇವರಪುರ ಸಮೀಪದ ದೇವರಕಾಡು ಪೈಸಾರಿ ನಿವಾಸಿ ಅಣ್ಣಯ್ಯ ಎಂಬುವವರೇ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ.
ಇದನ್ನೂ ಓದಿ:- ಹುಲ್ಲಹಳ್ಳಿ | ಕುಡಿಯುವ ನೀರಿಗಾಗಿ ಪರದಾಟ
ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಆನೆಗಳ ದಾಳಿಯನ್ನು ತಡೆಗಟ್ಟುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು, ಪರಿಶೀಲನೆ ನಡೆಸಿ ವ್ಯಕ್ತಿಯ ಸಾವಿಗೆ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ಈ ಸಂಬಂಧ ಕೊಡಗು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





