wild elephant attack
ಕೊಡಗು: ಕೊಡಗಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಕಾಡಾನೆ ದಾಳಿಗೆ ಮತ್ತೋರ್ವ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ.
ದೇವರಪುರ ಸಮೀಪದ ದೇವರಕಾಡು ಪೈಸಾರಿ ನಿವಾಸಿ ಅಣ್ಣಯ್ಯ ಎಂಬುವವರೇ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ.
ಇದನ್ನೂ ಓದಿ:- ಹುಲ್ಲಹಳ್ಳಿ | ಕುಡಿಯುವ ನೀರಿಗಾಗಿ ಪರದಾಟ
ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಆನೆಗಳ ದಾಳಿಯನ್ನು ತಡೆಗಟ್ಟುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು, ಪರಿಶೀಲನೆ ನಡೆಸಿ ವ್ಯಕ್ತಿಯ ಸಾವಿಗೆ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ಈ ಸಂಬಂಧ ಕೊಡಗು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…
ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ…
ಟೆಹರಾನ್: ಇರಾನ್-ಇಸ್ರೇಲ್ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್‌ನ್ಯೂಸ್ ಮತ್ತೊಂದು ಗುಡ್‌ನ್ಯೂಸ್ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ…
ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…
ಚಾಮರಾಜನಗರ: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್ ಮೀಡಿಯಾದಲ್ಲಿ ಪೆಟ್ರೋಲ್, ಡೀಸೆಲ್…
ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ…