ಕೊಡಗು

ಸೆ.2 ರಿಂದ ಕೊಡಗು ಜಿಲ್ಲೆಯಲ್ಲಿಯೂ ‘ಎನಿವೇರ್’ ನೋಂದಣಿ ಆರಂಭ

ಮಡಿಕೇರಿ: ಪ್ರಸಕ್ತ (2024-25) ಸಾಲಿನ ಆಯವ್ಯಯ ಭಾಷಣದಲ್ಲಿ ‘ಎನಿವೇರ್’ ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗಿದ್ದು, ಕೊಡಗು ಜಿಲ್ಲೆಯಲ್ಲಿಯೂ ಸೆಪ್ಟೆಂಬರ್ 2 ರಿಂದ ಪ್ರಕ್ರಿಯೆಗಳು ಆರಂಭವಾಗಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ವ್ಯವಸ್ಥೆಯನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ 2011 ರಲ್ಲಿ ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮಾರ್ಚ್ 2024 ರಲ್ಲಿ ನೋಂದಣಿ ಕಾಯ್ದೆ 1908 ರ ಕಲಂ (5) ಹಾಗೂ ಕಲಂ(6) ರಡಿಯಲ್ಲಿ ಜಾರಿಗೆ ಅನುಷ್ಠಾನಗೊಳಿಸಲಾಗಿದೆ.

ಎನಿವೇರ್ ನೋಂದಣಿ ವ್ಯವಸ್ಥೆಯು ಈ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಈ ಕಾರಣದಿಂದಾಗಿ ಎನಿವೇರ್ ನೋಂದಣಿಯನ್ನು ಕೊಡಗು ಜಿಲ್ಲೆಯ ಉಪನೋಂದಣಿ ಕಚೇರಿಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ.

ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದ್ದು, ಆದರೆ ಎನಿವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು.

ಎನಿವೇರ್ ನೋಂದಣಿ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು, ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆ ಹೆಚ್ಚಿಸುತ್ತದೆ. ನೋಂದಣಿಯಲ್ಲಿ ವಿಳಂಬವನ್ನು ತಡೆಗಟ್ಟುತ್ತದೆ. ಸಾರ್ವಜನಿಕರು ಸಮೀಪದಲ್ಲಿರುವ ಉಪನೋಂದಣಿ ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು. ಸ್ಲಾಟ್ ಲಭ್ಯವಿರುವಂತಹ ಕಚೇರಿಯನ್ನು ನೋಂದಣಿಗೆ ಆಯ್ಕೆ ಮಾಡಿಕೊಳ್ಳಬಹುದು. ನೋಂದಣಿ ಪ್ರಕ್ರಿಯೆ ಸುಲಭವಾಗುವುದಲ್ಲದೆ ಸಮಯವು ಸಹ ಉಳಿಯುತ್ತದೆ. ಉಪ ನೋಂದಣಿ ಕಚೇರಿಗಳಲ್ಲಿ ಜನದಟ್ಟಣೆ ಕಡಿಮೆಯಾಗುತ್ತದೆ. ಕಚೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆಯಾಗುತ್ತದೆ ಹಾಗೂ ಕಚೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುತ್ತದೆ.

ಆದ್ದರಿಂದ ಸಾರ್ವಜನಿಕರು ಎನಿವೇರ್ ನೋಂದಣಿಯ ಸದುಪಯೋಗಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಲಾಟ್ ಲಭ್ಯವಿರುವಂತಹ ಕಚೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

5 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

5 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

6 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

6 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

6 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

6 hours ago