Mysore
31
broken clouds

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ.

ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ ಗುಮ್ಮನಕೊಲ್ಲಿ ನಿವಾಸಿ ಕಲಾವತಿ ಎಂಬುವವರು ಇಬ್ಬರು ವಿವಾಹಿತ ಮಹಿಳೆಯರನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನಲಾಗಿದೆ.

ಸಾರ್ವಜನಿಕರ ನೀಡಿದ ದೂರಿನನ್ವಯ ದಾಳಿ ನಡೆಸಿದ ಕುಶಾಲನಗರ ಪೊಲೀಸರು ಮೈಸೂರು ಮತ್ತು ಸೋಮವಾರಪೇಟೆಯ ಮಹಿಳೆಯರನ್ನು ರಕ್ಷಿಸಿ ಮಡಿಕೇರಿ ಸಾಂತ್ವನ ಕೇಂದ್ರಕ್ಕೆ ದಾಖಲಿಸಿದ್ದಾರೆ.

ವ್ಯವಹಾರ ನಡೆಸುತ್ತಿದ್ದ ಕಲಾವತಿಯನ್ನು ಬಂಧಿಸಿರುವ ಪೊಲೀಸರು, ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

 

Tags:
error: Content is protected !!