ಮಡಿಕೇರಿ : ಜನರ ದಿಕ್ಕು ತಪ್ಪಿಸಲು ಆರ್‌ಎಸ್‌ಎಸ್ ವಿರುದ್ಧ ಸರ್ಕಾರದಿಂದ ಗದಪ್ರಹಾರ ನಡೆಯುತ್ತಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಘವು ನೂರು ವರ್ಷಗಳಿಂದ ಸಮಾಜಸೇವೆ ಮಾಡಿಕೊಂಡು ಬರುತ್ತಿದ್ದು, ನೂರು ವರ್ಷದ ಆಚರಣೆಯನ್ನು ಎಲ್ಲೆಡೆ ಮಾಡಲಾಗುತ್ತಿದೆ. ಆದರೆ, ಸರ್ಕಾರ ತನ್ನ ವಫಲ್ಯ ಮುಚ್ಚಿಹಾಕಲು ಆರ್‌ಎಸ್‌ಎಸ್ ವಿರುದ್ಧ ಈ ಹುನ್ನಾರ ಮಾಡುತ್ತಿದೆ ಎಂದರು.
ಇದನ್ನು ಓದಿ: ಚಿತ್ತಾಪುರದಲ್ಲಿ ಆರ್ ಎಸ್‍ಎಸ್ ಪಥಸಂಚಲನ ನಡೆಸಲು ಅನುಮತಿ: ಸಚಿವ ಪ್ರಿಯಾಂಕ್ ಖರ್ಗೆ ರಿಯಾಕ್ಷನ್
ಸರ್ಕಾರಿ ಜಾಗ ಬಳಸಲು ಶಿಷ್ಟಾಚಾರ ಇರಲಿ, ಅದು ಸಮಸ್ಯೆ ಅಲ್ಲ. ಸರ್ಕಾರದ ಮಾನದಂಡವನ್ನು ಪಾಲನೆ ಮಾಡಿದರೆ ಅನುಮತಿ ಕೊಡಲೇಬೇಕು ಎಂದ ಸಂಸದರು, ಸರ್ಕಾರಕ್ಕೆ ಒಂದು ರಸ್ತೆ ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತಿಲ್ಲ, ಅದನ್ನು ಮುಚ್ಚಿಹಾಕಲು ಈ ರೀತಿ ಸುದ್ದಿ ಮಾಡುತ್ತಿದ್ದಾರೆ. ಇದರ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ ಎಂದರು.
ಪಿಡಿಒ ಅಮಾನತು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಂಸದರು, ಎಲ್ಲರಿಗೂ ವಾಕ್ ಸ್ವಾತಂತ್ರ್ಯ, ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ. ಕಾಂಗ್ರೆಸ್‌ನವರಿಗೆ ನಮ್ಮ ಸಿದ್ಧಾಂತ ಸರಿ ಇಲ್ಲ ಎಂದ ಮಾತ್ರಕ್ಕೆ ಈ ರೀತಿ ಮಾಡುವುದು ಸರಿಯಲ್ಲ. ತಮ್ಮ ಬಿಡುವಿನ ಸಮಯದಲ್ಲಿ ಅಽಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಅಧಿಕಾರಿ ವಿರುದ್ಧ ಕ್ರಮ ಸರಿಯಲ್ಲ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದರು.
ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…
ಹಾಸನ: ಕಾರೊಂದು ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ…
ವಾಷಿಂಗ್ಟನ್: ಯುದ್ಧಕ್ಕೆ ಸಂಬಂಧಿಸಿದಂತೆ ಅಮೇರಿಕಾ ಪ್ರಜೆಗಳನ್ನು ಉದ್ದೇಶಿಸಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಷಣ ಮಾಡಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ವಿಶ್ವ ಹಿಂದೂ ಪರಿಷತ್ ವತಿಯಿಂದ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ನಗರದಾದ್ಯಂತ ಕೇಸರಿ ಬಾವುಟ, ಬ್ಯಾನರ್,…
ವಾಷಿಂಗ್ಟನ್: ಇನ್ನು ಎರಡು ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ದೇಶವನ್ನು…
ಲಕ್ಷ್ಮಿಕಾಂತ್ ಕೊಮಾರಪ್ಪ ಗ್ರಾಮೀಣ ಭಾಗದಲ್ಲಿ ಮನೆಮಾಡಿದ ಸಂಭ್ರಮ; ಭಕ್ತಿ ಭಾವದಿಂದ ಪ್ರಕೃತಿ-ಗ್ರಾಮದೇವಿಗೆ ಪೂಜೆ ಸೋಮವಾರಪೇಟೆ: ಗ್ರಾಮೀಣ ಪ್ರದೇಶದ ಜನಪದದ ಪ್ರಮುಖ…