ಕೊಡಗು

ಜನರ ದಿಕ್ಕು ತಪ್ಪಿಸಲು ಆರ್‌ಎಸ್‌ಎಸ್‌ ವಿರುದ್ಧ ಗದಪ್ರಹಾರ : ಸಂಸದ ಯದುವೀರ್‌

ಮಡಿಕೇರಿ : ಜನರ ದಿಕ್ಕು ತಪ್ಪಿಸಲು ಆರ್‌ಎಸ್‌ಎಸ್ ವಿರುದ್ಧ ಸರ್ಕಾರದಿಂದ ಗದಪ್ರಹಾರ ನಡೆಯುತ್ತಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಘವು ನೂರು ವರ್ಷಗಳಿಂದ ಸಮಾಜಸೇವೆ ಮಾಡಿಕೊಂಡು ಬರುತ್ತಿದ್ದು, ನೂರು ವರ್ಷದ ಆಚರಣೆಯನ್ನು ಎಲ್ಲೆಡೆ ಮಾಡಲಾಗುತ್ತಿದೆ. ಆದರೆ, ಸರ್ಕಾರ ತನ್ನ ವಫಲ್ಯ ಮುಚ್ಚಿಹಾಕಲು ಆರ್‌ಎಸ್‌ಎಸ್ ವಿರುದ್ಧ ಈ ಹುನ್ನಾರ ಮಾಡುತ್ತಿದೆ ಎಂದರು.

ಇದನ್ನು ಓದಿ: ಚಿತ್ತಾಪುರದಲ್ಲಿ ಆರ್ ಎಸ್‍ಎಸ್ ಪಥಸಂಚಲನ ನಡೆಸಲು ಅನುಮತಿ: ಸಚಿವ ಪ್ರಿಯಾಂಕ್‌ ಖರ್ಗೆ ರಿಯಾಕ್ಷನ್‌

ಸರ್ಕಾರಿ ಜಾಗ ಬಳಸಲು ಶಿಷ್ಟಾಚಾರ ಇರಲಿ, ಅದು ಸಮಸ್ಯೆ ಅಲ್ಲ. ಸರ್ಕಾರದ ಮಾನದಂಡವನ್ನು ಪಾಲನೆ ಮಾಡಿದರೆ ಅನುಮತಿ ಕೊಡಲೇಬೇಕು ಎಂದ ಸಂಸದರು, ಸರ್ಕಾರಕ್ಕೆ ಒಂದು ರಸ್ತೆ ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತಿಲ್ಲ, ಅದನ್ನು ಮುಚ್ಚಿಹಾಕಲು ಈ ರೀತಿ ಸುದ್ದಿ ಮಾಡುತ್ತಿದ್ದಾರೆ. ಇದರ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ ಎಂದರು.

ಪಿಡಿಒ ಅಮಾನತು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಂಸದರು, ಎಲ್ಲರಿಗೂ ವಾಕ್ ಸ್ವಾತಂತ್ರ್ಯ, ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ. ಕಾಂಗ್ರೆಸ್‌ನವರಿಗೆ ನಮ್ಮ ಸಿದ್ಧಾಂತ ಸರಿ ಇಲ್ಲ ಎಂದ ಮಾತ್ರಕ್ಕೆ ಈ ರೀತಿ ಮಾಡುವುದು ಸರಿಯಲ್ಲ. ತಮ್ಮ ಬಿಡುವಿನ ಸಮಯದಲ್ಲಿ ಅಽಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಅಧಿಕಾರಿ ವಿರುದ್ಧ ಕ್ರಮ ಸರಿಯಲ್ಲ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದರು.

ಆಂದೋಲನ ಡೆಸ್ಕ್

Recent Posts

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

2 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

2 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

2 hours ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

2 hours ago

ಓದುಗರ ಪತ್ರ: 365 ದಿನಗಳೂ ಸಾರ್ವಜನಿಕ ಗ್ರಂಥಾಲಯಗಳ ಸೇವೆ ಲಭ್ಯವಿರಲಿ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು…

2 hours ago

ಯುವಜನರ ಕೈಯಲ್ಲಿ ಮೊಬೈಲ್ ಇದೆ; ದಿಕ್ಕು ಇದೆಯೇ?

ಟಿ.ಕೆ.ಹರೀಶ್ ತಕ್ಷಣದ ಯಶಸ್ಸಿನ ಸಂಸ್ಕೃತಿಯಿಂದ ಅಪಾಯಕಾರಿ ; ಯುವಜನರಿಗೆ ಮನವರಿಕೆ ಅಗತ್ಯ ಇಂದು ಒಂದು ಮಗು ಹುಟ್ಟಿದಾಗ ಅದರ ಸುತ್ತಲೂ…

2 hours ago