Mysore
13
scattered clouds

Social Media

ಬುಧವಾರ, 24 ಡಿಸೆಂಬರ್ 2025
Light
Dark

ಮಡಿಕೇರಿ | ಮಹಿಳಾ ಪೊಲೀಸ್ ಪಿಎಸ್ಐ ಮೇಲೆ ಹಲ್ಲೆಗೆ ಯತ್ನ?

Attempt to assault a woman police PSI

ಮಡಿಕೇರಿ: ಕೊಲೆ ಪ್ರಕರಣದ ಶಂಕಿತ ಆರೋಪಿಯೊಬ್ಬ ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಲು ಯತ್ನಿಸಿರುವ ಆರೋಪ ಕೇಳಿಬಂದಿದೆ.

ಕೊಲೆ ಪ್ರಕರಣದ ಶಂಕಿತ ಆರೋಪಿಯನ್ನು ಗೋಣಿಕೊಪ್ಪದಿಂದ ಮಡಿಕೇರಿಗೆ ಕರೆದುಕೊಂಡು ಬರುತ್ತಿದ್ದ ಸಂದರ್ಭ ಮೂರ್ನಾಡುವಿನಲ್ಲಿ ಹಸೈನಾರ್ ಎಂಬುವವರ ಮಗ ಲತೀಫ್ ಎಂಬಾತ ಪೊಲೀಸ್ ವಾಹನಕ್ಕೆ ಸಂಚರಿಸಲು ಅನುವು ಮಾಡಿಕೊಡದೆ ವಾಗ್ವಾದಕ್ಕಿಳಿದು ಮಹಿಳಾ ಪಿಎಸ್ಐ ಮೇಲೆಯೇ ಹಲ್ಲೆಗೆ ಯತ್ನಿಸಿರುವ ಬಗ್ಗೆ ಆರೋಪ ಕೇಳಿಬಂದಿದೆ. ಈ ಸಂಬಂಧ ಲತೀಫ್‌ನನ್ನು ಮೂರ್ನಾಡು ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಲಾಗಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Tags:
error: Content is protected !!