Mysore
15
few clouds

Social Media

ಬುಧವಾರ, 21 ಜನವರಿ 2026
Light
Dark

ಗಾಂಜಾ ಮಾರಾಟಕ್ಕೆ ಯತ್ನ : ಇಬ್ಬರ ಬಂಧನ

Ganja

ಮಡಿಕೇರಿ : ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಗ ಬಾಣಂಗಾಲ ಗ್ರಾಮದಲ್ಲಿ ಗಾಂಜಾ ಸರಬರಾಜು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಪಶ್ಚಿಮಬಂಗಾಳ ರಾಜ್ಯ ನಾದಿಯ ಜಿಲ್ಲೆ ಮೂಲದ ಸಿದ್ದಾಪುರದ ಮಾರ್ಗೊಲ್ಲಿ ಟಾಟಾ ಕಾಫಿ ಎಸ್ಟೇಟ್ ಲೈನ್‌ಮನೆ ನಿವಾಸಿಗಳಾದ ಅರ್ಚನಾ ಸರ್ದಾರ್(೩೦) ಹಾಗೂ ತಪಾನ್ ಸರ್ದಾರ್(೩೮) ಬಂಧಿತ ಆರೋಪಿಗಳು.

ಸೆ.೧೪ರಂದು ಬಾಡಗ ಬಾಣಂಗಾಲ ಗ್ರಾಮದ ಮಾರ್ಗೊಲ್ಲಿ ಟಾಟಾ ಕಾಫಿ ಎಸ್ಟೇಟ್ ಜಂಕ್ಷನ್ ಬಸ್ ನಿಲ್ದಾಣದ ಬಳಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುವ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದರು. ಬಂಽತರಿಂದ ೧ ಕೆ.ಜಿ. ೧೬೬ ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಮಡಿಕೇರಿ ಉಪವಿಭಾಗ ಡಿಎಸ್‌ಪಿ ಪಿ.ಎ.ಸೂರಜ್, ಮಡಿಕೇರಿ ನಗರ ವೃತ್ತ ಸಿಪಿಐ ಪಿ.ಕೆ.ರಾಜು, ಸಿದ್ದಾಪುರ ಪೊಲೀಸ್ ಠಾಣಾ ಪಿಎಸ್‌ಐ ಮಂಜುನಾಥ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಆರೋಪಿಯನ್ನು ಪತ್ತೆ ಮಾಡುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಪೊಲೀಸ್ ಅಧಿಕ್ಷಕ ಕೆ.ರಾಮರಾಜನ್ ಮತ್ತು ಹೆಚ್ಚುವರಿ ಪೊಲೀಸ್ ಅಧಿಕ್ಷಕ ಬಿ.ಪಿ.ದಿನೇಶ್ ಕುಮಾರ್ ಶ್ಲಾಘಿಸಿದ್ದಾರೆ.

Tags:
error: Content is protected !!