Ganja
ಮಡಿಕೇರಿ : ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಗ ಬಾಣಂಗಾಲ ಗ್ರಾಮದಲ್ಲಿ ಗಾಂಜಾ ಸರಬರಾಜು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಪಶ್ಚಿಮಬಂಗಾಳ ರಾಜ್ಯ ನಾದಿಯ ಜಿಲ್ಲೆ ಮೂಲದ ಸಿದ್ದಾಪುರದ ಮಾರ್ಗೊಲ್ಲಿ ಟಾಟಾ ಕಾಫಿ ಎಸ್ಟೇಟ್ ಲೈನ್‌ಮನೆ ನಿವಾಸಿಗಳಾದ ಅರ್ಚನಾ ಸರ್ದಾರ್(೩೦) ಹಾಗೂ ತಪಾನ್ ಸರ್ದಾರ್(೩೮) ಬಂಧಿತ ಆರೋಪಿಗಳು.
ಸೆ.೧೪ರಂದು ಬಾಡಗ ಬಾಣಂಗಾಲ ಗ್ರಾಮದ ಮಾರ್ಗೊಲ್ಲಿ ಟಾಟಾ ಕಾಫಿ ಎಸ್ಟೇಟ್ ಜಂಕ್ಷನ್ ಬಸ್ ನಿಲ್ದಾಣದ ಬಳಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುವ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದರು. ಬಂಽತರಿಂದ ೧ ಕೆ.ಜಿ. ೧೬೬ ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಮಡಿಕೇರಿ ಉಪವಿಭಾಗ ಡಿಎಸ್‌ಪಿ ಪಿ.ಎ.ಸೂರಜ್, ಮಡಿಕೇರಿ ನಗರ ವೃತ್ತ ಸಿಪಿಐ ಪಿ.ಕೆ.ರಾಜು, ಸಿದ್ದಾಪುರ ಪೊಲೀಸ್ ಠಾಣಾ ಪಿಎಸ್‌ಐ ಮಂಜುನಾಥ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಆರೋಪಿಯನ್ನು ಪತ್ತೆ ಮಾಡುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಪೊಲೀಸ್ ಅಧಿಕ್ಷಕ ಕೆ.ರಾಮರಾಜನ್ ಮತ್ತು ಹೆಚ್ಚುವರಿ ಪೊಲೀಸ್ ಅಧಿಕ್ಷಕ ಬಿ.ಪಿ.ದಿನೇಶ್ ಕುಮಾರ್ ಶ್ಲಾಘಿಸಿದ್ದಾರೆ.
ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…
ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ…
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…
ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…
ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…