ಕೊಡಗು

ಗಾಂಜಾ ಮಾರಾಟಕ್ಕೆ ಯತ್ನ : ಬಂಧನ

ಮಡಿಕೇರಿ : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಪಟ್ಟಣದ ಸುಣ್ಣದ ಬೀದಿಯ ಅಸೈನಾರ್ ರಜಾಕ್ (43) ಹಾಗೂ ಬಾಳುಗೋಡು ಬಿಟ್ಟಂಗಾಲ ಗ್ರಾಮದ ಮೋಹನ ಎ.ಜಿ.ಅಶೋಕ (42) ಆರೋಪಿಗಳು. ಬಂಧಿತರಿಂದ 1 ಕೆಜಿ 60 ಗ್ರಾಂ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಒಂಟಿಯಂಗಡಿ ರಸ್ತೆಯ ಪ್ರೌಢಶಾಲೆ ಮೈದಾನದ ಬಳಿಯ ಬಸ್ ತಂಗುದಾಣದಲ್ಲಿ ಇಬ್ಬರು ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಉಪವಿಭಾಗದ ಡಿವೈಎಸ್‌ಪಿ ಮಹೇಶ್ ಕುಮಾರ್, ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಪಿಎಸ್‌ಐಗಳಾದ ಎನ್.ಜೆ. ಲತಾ, ಬಿ.ಎಸ್. ವಾಣಿಶ್ರೀ, ಪ್ರಮೋದ್, ಎಎಸ್‌ಐ ಕೆ.ಬಿ.ಸೋಮಣ್ಣ, ಹೆಚ್.ಸಿಗಳಾದ ಎಸ್.ಎಲ್.ನವೀನ್ ಕುಮಾರ್, ಎಂ.ಬಸವರಾಜು, ಅಬ್ದುಲ್ ಮಜೀದ್, ಕೆ.ಎ.ಹನೀಫ್, ಎಂ.ಎಸ್. ಬೋಪಣ್ಣ, ರಾಧಾ, ಪಿ.ಸಿಗಳಾದ ಎಸ್.ಮಹೇಶ್, ಶಿವಪ್ರಸಾದ್, ಎಸ್.ರಾಜೇಶ್, ರಾಘವೇಂದ್ರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಪೊಲೀಸ್ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಶ್ಲಾಘಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…

6 hours ago

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

10 hours ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

10 hours ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

10 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

11 hours ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

11 hours ago