ಮಡಿಕೇರಿ : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಪಟ್ಟಣದ ಸುಣ್ಣದ ಬೀದಿಯ ಅಸೈನಾರ್ ರಜಾಕ್ (43) ಹಾಗೂ ಬಾಳುಗೋಡು ಬಿಟ್ಟಂಗಾಲ ಗ್ರಾಮದ ಮೋಹನ ಎ.ಜಿ.ಅಶೋಕ (42) ಆರೋಪಿಗಳು. ಬಂಧಿತರಿಂದ 1 ಕೆಜಿ 60 ಗ್ರಾಂ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಒಂಟಿಯಂಗಡಿ ರಸ್ತೆಯ ಪ್ರೌಢಶಾಲೆ ಮೈದಾನದ ಬಳಿಯ ಬಸ್ ತಂಗುದಾಣದಲ್ಲಿ ಇಬ್ಬರು ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಉಪವಿಭಾಗದ ಡಿವೈಎಸ್‌ಪಿ ಮಹೇಶ್ ಕುಮಾರ್, ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಪಿಎಸ್‌ಐಗಳಾದ ಎನ್.ಜೆ. ಲತಾ, ಬಿ.ಎಸ್. ವಾಣಿಶ್ರೀ, ಪ್ರಮೋದ್, ಎಎಸ್‌ಐ ಕೆ.ಬಿ.ಸೋಮಣ್ಣ, ಹೆಚ್.ಸಿಗಳಾದ ಎಸ್.ಎಲ್.ನವೀನ್ ಕುಮಾರ್, ಎಂ.ಬಸವರಾಜು, ಅಬ್ದುಲ್ ಮಜೀದ್, ಕೆ.ಎ.ಹನೀಫ್, ಎಂ.ಎಸ್. ಬೋಪಣ್ಣ, ರಾಧಾ, ಪಿ.ಸಿಗಳಾದ ಎಸ್.ಮಹೇಶ್, ಶಿವಪ್ರಸಾದ್, ಎಸ್.ರಾಜೇಶ್, ರಾಘವೇಂದ್ರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಪೊಲೀಸ್ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಶ್ಲಾಘಿಸಿದ್ದಾರೆ.
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…