ಶನಿವಾರಸಂತೆ : ಶಾಲೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳ ಮೇಲೆ ತೋಟವೊಂದರಲ್ಲಿ ಕಾದು ಕುಳಿತ ಯುವಕ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಕಿರು ಬಿಳಹ ಗ್ರಾಮದ ಲೋಕೇಶ್ ಅಲಿಯಾಸ್ ಪುಟ್ಟ ಎಂಬಾತ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ. ಶನಿವಾರಸಂತೆಯ ಶಾಲೆಯೊಂದರ ವಿದ್ಯಾರ್ಥಿನಿ ಬುಧವಾರ ಸಂಜೆ ಶಾಲೆ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಸಮಯದಲ್ಲಿ ತೋಟವೊಂದರಲ್ಲಿ ಹೊಂಚು ಹಾಕಿದ ಆರೋಪಿ ಲೋಕೇಶ್ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಬಾಲಕಿ ಕೂಗಿಕೊಂಡಾಗ ಸ್ಥಳೀಯರು ಸ್ಥಳಕ್ಕೆ ಬಂದು ಬಾಲಕಿಯನ್ನು ರಕ್ಷಿಸಿ ಆರೋಪಿಯನ್ನು ಹಿಡಿದು ಶನಿವಾರಸಂತೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿ ಕಾನೂನು ಕ್ರಮಕೈಗೊಂಡಿದ್ದಾರೆ. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





