ಕೊಡಗು: ಕಳೆದ ಕೆಲ ದಿನಗಳಿಂದ ಬಿಸಿಲಿನ ವಾತಾವರಣ ಕಂಡುಬಂದಿರುವ ಕೊಡಗಿನಲ್ಲಿ ಈಗ ಮತ್ತೆ ಮಳೆಯಾಗಲಿದೆ ಎಂಬ ಮುನ್ಸೂಚನೆ ಬಂದಿದೆ.
ಕೊಡಗು ಜಿಲ್ಲೆಯಲ್ಲಿ ಮಳೆ ಬಹುತೇಕ ಕಡಿಮೆಯಾಗಿದ್ದು, ಬಿಸಿಲಿನ ವಾತಾವರಣ ಕಂಡುಬಂದಿದೆ. ಆದರೆ ಈಗ ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಕೊಡಗು ಜನತೆ ಆಗಸ್ಟ್ ಅಂತ್ಯದವರೆಗೂ ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಸೂಚನೆ ನೀಡಿದೆ.
ಈ ನಡುವೆ ಸೆಪ್ಟೆಂಬರ್‌ನಲ್ಲಿಯೂ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಮೂಲಕ ಕೊಡಗು ಜನತೆಗೆ ಮತ್ತೆ ಶಾಕ್ ಎದುರಾಗಿದೆ.
ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿರುವುದರಿಂದ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ್ದಾರೆ.
ವಿಡಿಯೋ ಸಂವಾದದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು, ಎಲ್ಲಾ ಅಧಿಕಾರಿಗಳು ನಿಯೋಜಿತ ಸ್ಥಳದಲ್ಲಿದ್ದು, ಮಳೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಮಳೆ ಹೆಚ್ಚಾದರೆ ತಕ್ಷಣ ಪರಿಹಾರ ಹಾಗೂ ರಕ್ಷಣಾ ಕ್ರಮಗಳಿಗೆ ಮುಂದಾಗಬೇಕು ಎಂದು ಸಲಹೆ ನೀಡಿದ್ದಾರೆ.
ಇನ್ನು ಕೊಡಗು ಜಿಲ್ಲೆಯಲ್ಲಿ ಸೆಪ್ಟೆಂಬರ್‌ನಲ್ಲಿಯೂ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದ್ದು, ಜನತೆ ಎಚ್ಚರಿಕೆ ವಹಿಸಬೇಕು. ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಬಹಳ ಸುರಕ್ಷತೆ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.





