ಕೊಡಗು

ಮತ್ತೆ ಭಯಭೀತರಾದ ಕೊಡಗು ಜನತೆ: ಆಗಸ್ಟ್‌ ಅಂತ್ಯದವರೆಗೂ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಕೊಡಗು: ಕಳೆದ ಕೆಲ ದಿನಗಳಿಂದ ಬಿಸಿಲಿನ ವಾತಾವರಣ ಕಂಡುಬಂದಿರುವ ಕೊಡಗಿನಲ್ಲಿ ಈಗ ಮತ್ತೆ ಮಳೆಯಾಗಲಿದೆ ಎಂಬ ಮುನ್ಸೂಚನೆ ಬಂದಿದೆ.

ಕೊಡಗು ಜಿಲ್ಲೆಯಲ್ಲಿ ಮಳೆ ಬಹುತೇಕ ಕಡಿಮೆಯಾಗಿದ್ದು, ಬಿಸಿಲಿನ ವಾತಾವರಣ ಕಂಡುಬಂದಿದೆ. ಆದರೆ ಈಗ ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಕೊಡಗು ಜನತೆ ಆಗಸ್ಟ್‌ ಅಂತ್ಯದವರೆಗೂ ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಸೂಚನೆ ನೀಡಿದೆ.

ಈ ನಡುವೆ ಸೆಪ್ಟೆಂಬರ್‌ನಲ್ಲಿಯೂ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಮೂಲಕ ಕೊಡಗು ಜನತೆಗೆ ಮತ್ತೆ ಶಾಕ್‌ ಎದುರಾಗಿದೆ.

ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿರುವುದರಿಂದ ಕೊಡಗು ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಅವರು ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ್ದಾರೆ.

ವಿಡಿಯೋ ಸಂವಾದದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಅವರು, ಎಲ್ಲಾ ಅಧಿಕಾರಿಗಳು ನಿಯೋಜಿತ ಸ್ಥಳದಲ್ಲಿದ್ದು, ಮಳೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಮಳೆ ಹೆಚ್ಚಾದರೆ ತಕ್ಷಣ ಪರಿಹಾರ ಹಾಗೂ ರಕ್ಷಣಾ ಕ್ರಮಗಳಿಗೆ ಮುಂದಾಗಬೇಕು ಎಂದು ಸಲಹೆ ನೀಡಿದ್ದಾರೆ.

ಇನ್ನು ಕೊಡಗು ಜಿಲ್ಲೆಯಲ್ಲಿ ಸೆಪ್ಟೆಂಬರ್‌ನಲ್ಲಿಯೂ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದ್ದು, ಜನತೆ ಎಚ್ಚರಿಕೆ ವಹಿಸಬೇಕು. ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಬಹಳ ಸುರಕ್ಷತೆ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

22 mins ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

23 mins ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

23 mins ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

24 mins ago

ಇರಾನ್‌ಗೆ ಇಸ್ರೇಲ್‌ ಖಡಕ್‌ ಎಚ್ಚರಿಕೆ: ಏನದು ಗೊತ್ತಾ.?

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…

26 mins ago

ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಘಟಿಕೋತ್ಸವ: ರಾಜ್ಯಪಾಲರಿಂದ ಸಾಲೂರು ಮಠದ ಸ್ವಾಮೀಜಿಗೆ ಪಿಎಚ್‌ಡಿ ಪ್ರದಾನ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಬೆಂಗಳೂರು: ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ…

27 mins ago