ಕೊಡಗು

ಕೊಡಗು| ಆಟೋದಲ್ಲಿ ಮಲಗಿರುವಾಗಲೇ ಪ್ರಾಣ ಬಿಟ್ಟ ಚಾಲಕ

ಕೊಡಗು: ಆಟೋದಲ್ಲಿ ಮಲಗಿರುವಾಗಲೇ ಚಾಲಕರೋರ್ವರು ಪ್ರಾಣಬಿಟ್ಟ ಘಟನೆಯೊಂದು ಶನಿವಾರಸಂತೆಯಲ್ಲಿ ನಡೆದಿದೆ.

ಆಟೋ ಚಾಲಕ ಮಂಜುನಾಥ್‌ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ.

ಸಿದ್ಧಲಿಂಗಪುರದ ನಿವಾಸಿಯಾಗಿದ್ದ ಮಂಜುನಾಥ್‌, ಶನಿವಾರಸಂತೆಯ ಗುಂಡೂರಾವ್‌ ಬಡಾವಣೆಯಲ್ಲಿ ವಾಸವಿದ್ದರು.

ಪ್ರತಿನಿತ್ಯ ಆಟೋದಲ್ಲೇ ಮಲಗಿ, ಆಟೋ ನಿಲ್ದಾಣದಲ್ಲಿ ರಾತ್ರಿ ಕಳೆಯುತ್ತಿದ್ದರು. ಅದರಂತೆ ನಿನ್ನೆಯೂ ಸಹ ಆಟೋದಲ್ಲೇ ಮಲಗಿದ್ದರು. ಇಂದು ಬೆಳಗ್ಗೆ ಇತರೆ ಆಟೋ ಚಾಲಕರು ಬಂದು ನೋಡಿದಾಗ ಆಟೋದಲ್ಲೇ ಪ್ರಾಣ ಬಿಟ್ಟಿರುವ ವಿಷಯ ತಿಳಿದು ಬಂದಿದೆ.

ಮೃತ ಮಂಜುನಾಥ್‌ ವಿವಾಹವಾಗಿದ್ದು, ಮನೆಯಲ್ಲಿ ಮನಸ್ತಾಪ ಇದ್ದ ಕಾರಣ ಕುಟುಂಬದಿಂದ ದೂರ ಉಳಿದಿದ್ದರು ಎನ್ನಲಾಗಿದೆ. ಈ ಸಂಬಂಧ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಎರಡು ಗಂಟೆ ಹೆಣ್ಣಾದಾಗಲೇ ಹೀಗೆ! ಪೂರ್ತಿ ಹೆಣ್ಣು ಜನ್ಮದ ಸಂಕಷ್ಟ ಹೇಗಿರಬಹುದು?

ಪಾತು ದೆಹಲಿ ನಗರ, ಹಗಲಿನ ಬೆಳಕು ನಿಧಾನಕ್ಕೆ ಕರಗಿ ಕತ್ತಲು ಇಷ್ಟಿಷ್ಟಾಗಿ ನಗರವನ್ನು ಆವರಿಸಿಕೊಳ್ಳುತ್ತಿತ್ತು, ರಸ್ತೆಗಳು ನಿರ್ಜನವಾಗುತ್ತಿದ್ದವು. ಇದೇ ಹೊತ್ತಲ್ಲಿ,…

3 hours ago

ಸೈಕಲ್ ನಂಜುಂಡಸ್ವಾಮಿಯ ಪಂಕ್ಚರ್ ಶಾಪ್ ಖಾಲಿ ಖಾಲಿ

ಅಜಯ್ ಕುಮಾರ್ ಎಂ.ಗುಂಬಳ್ಳಿ ಈಗ ಸೈಕಲ್‌ಗಳು ಅತಿವಿರಳ. ಊರಿನಲ್ಲಿ ನಾಲ್ಕೈದು ಮಂದಿ ಹಿರಿಯರು ಇನ್ನೂ ಗದ್ದೆಗೆ, ಕೆಲಸಕ್ಕೆ ಹೋಗಲು ಸೈಕಲ್…

3 hours ago

ಶಾಂತಿದೂತನ ನಾಡಿನಲ್ಲಿ ದ್ವೇಷದ ಕೆನ್ನಾಲಿಗೆ

ಫಾತಿಮಾ ರಲಿಯಾ ಕಳೆದ ಜುಲೈನಲ್ಲಿ ದಕ್ಷಿಣ ಆಫ್ರಿಕಾದ ಡರ್ಬನ್‌ನ ವಾರ್ವಿಕ್ ಸ್ಟ್ರೀಟ್ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದ ಆರು ಮಂದಿ ಆಫ್ರಿಕನ್…

3 hours ago

ಇಂದು ಮೈಸೂರಿನಲ್ಲಿ ಜಾಗತಿಕ ಸೈಕಲ್ ಸವಾರಿ

ಸಿರಿ ಮೈಸೂರು ಹಿಂದೊಮ್ಮೆ ಕಾಲವೊಂದಿತ್ತು. ಆಗೆಲ್ಲಾ ರಸ್ತೆಯಲ್ಲಿ ಮೋಟಾರು ವಾಹನಗಳ ಸುಳಿವೇ ಇರುತ್ತಿರಲಿಲ್ಲ. ಬಹಳ ಶ್ರೀಮಂತರು ಮಾತ್ರ ಮೋಟಾರು ವಾಹನಗಳನ್ನು…

3 hours ago

ನಾಳೆ ಅರಮನೆಗೆ ಅಭಿಮನ್ಯು ಪ್ರವೇಶ

ಚಿರಂಜೀವಿ ಸಿ.ಹುಲ್ಲಹಳ್ಳಿ ಸತತ ಆರು ಬಾರಿ ಅಂಬಾರಿ ಹೊತ್ತಿದ್ದ ಆನೆ; ಈ ಬಾರಿ ನಿಶಾನೆ ಆನೆಯಾಗಿ ಭಾಗಿಯಾಗುವ ಸಾಧ್ಯತೆ ಮೈಸೂರು:…

3 hours ago